ಹಳೆಯ ದಾಖಲೆಗಳು ಧೂಳೀಪಟ: ಹಿಟ್ಮ್ಯಾನ್ ಹೊಸ ಸಿಕ್ಸರ್ ಕಿಂಗ್
Rohit Sharma Records: ಪರಿಣಾಮ ಕೇವಲ 63 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಅಷ್ಟೇ ಅಲ್ಲದೆ 84 ಎಸೆತಗಳನ್ನು ಎದುರಿಸಿದ ಹಿಟ್ಮ್ಯಾನ್ ಅಂತಿಮವಾಗಿ 5 ಭರ್ಜರಿ ಸಿಕ್ಸ್ ಹಾಗೂ 16 ಫೋರ್ಗಳೊಂದಿಗೆ 131 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.
Updated on: Oct 11, 2023 | 9:07 PM

ಅಫ್ಘಾನಿಸ್ತಾನ್ ವಿರುದ್ಧ ನಡೆದ ಏಕದಿನ ವಿಶ್ವಕಪ್ನ 9ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹಿಟ್ಮ್ಯಾನ್ ಈ ಪಂದ್ಯದಲ್ಲಿ ಸಿಕ್ಸ್-ಫೋರ್ಗಳ ಸುರಿಮಳೆಗೈದರು.

ಪರಿಣಾಮ ಕೇವಲ 63 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು. ಅಷ್ಟೇ ಅಲ್ಲದೆ 84 ಎಸೆತಗಳನ್ನು ಎದುರಿಸಿದ ಹಿಟ್ಮ್ಯಾನ್ ಅಂತಿಮವಾಗಿ 5 ಭರ್ಜರಿ ಸಿಕ್ಸ್ ಹಾಗೂ 16 ಫೋರ್ಗಳೊಂದಿಗೆ 131 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

ವಿಶೇಷ ಎಂದರೆ ಈ 5 ಸಿಕ್ಸ್ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ನ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 553 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ಉಡೀಸ್ ಮಾಡಿರುವ ರೋಹಿತ್ ಶರ್ಮಾ ಒಟ್ಟು 556 ಅಂತಾರಾಷ್ಟ್ರೀಯ ಸಿಕ್ಸ್ಗಳನ್ನು ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕ್ರಿಕೆಟ್ ಅಂಗಳದ ಹೊಸ ಸಿಕ್ಸರ್ ಕಿಂಗ್ ಪಟ್ಟವನ್ನು ಅಲಂಕರಿಸಿದ್ದಾರೆ.



















