ಬಾಬರ್ ಆಝಂ ದಾಖಲೆ ಉಡೀಸ್: ರೋಹಿತ್ ಶರ್ಮಾ ವಿಶ್ವದ ನಂಬರ್ 1 ಕ್ಯಾಪ್ಟನ್

Rohit Sharma: ರೋಹಿತ್ ಶರ್ಮಾ ಭಾರತ ಟಿ20 ತಂಡದ ಅತ್ಯಂತ ಯಶಸ್ವಿ ನಾಯಕ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 41 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ವಿರಾಟ್ ಕೊಹ್ಲಿ ಸಾರಥ್ಯದಲ್ಲಿ ಭಾರತ ತಂಡವು 30 ಟಿ20 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ರೋಹಿತ್ ಶರ್ಮಾ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಈವರೆಗೆ 49 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ.

ಝಾಹಿರ್ ಯೂಸುಫ್
|

Updated on: Jun 28, 2024 | 12:48 PM

T20 World Cup 2024: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ನಾಯಕ ರೋಹಿತ್ ಶರ್ಮಾ (Rohit Sharma) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಅಂದರೆ ಇಂಗ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕನೆಂಬ ಹಿರಿಮೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ದಾಖಲೆ ಬಾಬರ್ ಆಝಂ ಹೆಸರಿನಲ್ಲಿತ್ತು.

2 / 5
ಬಾಬರ್ ಆಝಂ ನಾಯಕತ್ವದಲ್ಲಿ ಪಾಕಿಸ್ತಾನ್ ತಂಡವು 85 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. ಈ ವೇಳೆ ಪಾಕ್ ಪಡೆ 48 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಗೆಲುವು ಕಂಡ ನಾಯಕ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾಗಿದ್ದಾರೆ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಈವರೆಗೆ 61 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡವು 49 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ನಾಯಕನೆಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಗಿದೆ.

4 / 5
ಇನ್ನು ಜೂನ್ 29 ರಂದು ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಪಂದ್ಯಗಳಲ್ಲಿ ಜಯ ಸಾಧಿಸಿದ ಮೊದಲ ನಾಯಕನೆಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಲಿದ್ದಾರೆ. ಅದರಂತೆ ವಿಶ್ವ ಚಾಂಪಿಯನ್ ಪಟ್ಟದೊಂದಿಗೆ ಹಿಟ್​ಮ್ಯಾನ್ ನಾಯಕತ್ವದಲ್ಲೂ ಹೊಸ ದಾಖಲೆ ಬರೆಯಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ

ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ

Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು