AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಧೋನಿ ದಾಖಲೆ ಉಡೀಸ್: ರೋಹಿತ್ ಶರ್ಮಾ ಈಗ ನಂಬರ್ 1 ಕ್ಯಾಪ್ಟನ್

Rohit Sharma Records: ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಇಯಾನ್ ಮೋರ್ಗನ್ (ಇಂಗ್ಲೆಂಡ್), ಬಾಬರ್ ಆಝಂ (ಪಾಕಿಸ್ತಾನ್) ಹಾಗೂ ಅಸ್ಗರ್ ಅಫ್ಘಾನ್ (ಅಫ್ಘಾನಿಸ್ತಾನ್) ಮೊದಲ ಸ್ಥಾನಗಳಲ್ಲಿದ್ದಾರೆ.

TV9 Web
| Edited By: |

Updated on: Jan 18, 2024 | 10:21 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 212 ರನ್​ಗಳಿಸಿದರೆ, ಈ ಮೊತ್ತವನ್ನು ಸರಿಗಟ್ಟುವ ಮೂಲಕ ಅಫ್ಘಾನಿಸ್ತಾನ್ ಪಂದ್ಯವನ್ನು ಟೈ ಮಾಡಿಕೊಂಡಿತು.

1 / 7
ಇನ್ನು ಮೊದಲ ಸೂಪರ್​ನಲ್ಲಿ ಅಫ್ಘಾನಿಸ್ತಾನ್ ನೀಡಿದ 16 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕಲೆಹಾಕಿದ್ದು 16 ರನ್​ಗಳು. ಈ ಟೈನೊಂದಿಗೆ ಪಂದ್ಯವು 2ನೇ ಸೂಪರ್​ ಓವರ್​ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್​ನಲ್ಲಿ ಭಾರತ ತಂಡವು 11 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ್ 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 7
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತ ತಂಡದ ಯಶಸ್ವಿ ನಾಯಕರೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

3 / 7
ಅಂದರೆ ಧೋನಿ ನಾಯಕತ್ವದಲ್ಲಿ ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಟಿ20 ಕ್ರಿಕೆಟ್​ನಲ್ಲಿ 72 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಧೋನಿ ಒಟ್ಟು 41 ಗೆಲುವು ತಂದುಕೊಟ್ಟಿದ್ದರು.

4 / 7
ಇದೀಗ 54 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಒಟ್ಟು 42 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡಕ್ಕೆ ಅತ್ಯಧಿಕ ಗೆಲುವು ತಂದುಕೊಟ್ಟ ನಾಯಕ ಎನಿಸಿಕೊಂಡಿದ್ದಾರೆ.

5 / 7
ಹಾಗೆಯೇ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಇಯಾನ್ ಮೋರ್ಗನ್ (ಇಂಗ್ಲೆಂಡ್), ಬಾಬರ್ ಆಝಂ (ಪಾಕಿಸ್ತಾನ್) ಹಾಗೂ ಅಸ್ಗರ್ ಅಫ್ಘಾನ್ (ಅಫ್ಘಾನಿಸ್ತಾನ್) ಮೊದಲ ಸ್ಥಾನಗಳಲ್ಲಿದ್ದಾರೆ.

6 / 7
ಇದೀಗ 42 ಜಯದೊಂದಿಗೆ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಒಂದು ಗೆಲುವು ತಂದುಕೊಟ್ಟರೆ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಗಲಿದೆ.

7 / 7
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ