Rohit Sharma: ಹೊಸ ವಿಶ್ವ ದಾಖಲೆ ಬರೆಯುವ ಸನಿಹದಲ್ಲಿ ರೋಹಿತ್ ಶರ್ಮಾ
Rohit Sharma Records: ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ಬ್ಯಾಟರ್ 600 ಸಿಕ್ಸ್ಗಳನ್ನು ಬಾರಿಸಿಲ್ಲ. ಇದೀಗ ಆರು ನೂರು ಸಿಕ್ಸರ್ಗಳ ಸರದಾರ ಎನಿಸಿಕೊಳ್ಳಲು ರೋಹಿತ್ ಶರ್ಮಾಗೆ ಬೇಕಿರುವುದು ಬೆರಳಣಿಕೆಯ ಬಿಗ್ ಹಿಟ್ಗಳು ಮಾತ್ರ.
Updated on: Jan 09, 2024 | 8:30 AM

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊಸ ವಿಶ್ವ ದಾಖಲೆ ಬರೆಯಬಹುದು. ಅದು ಕೂಡ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಮಾಡದ ವರ್ಲ್ಡ್ ರೆಕಾರ್ಡ್ ಎಂಬುದು ವಿಶೇಷ.

ಅಂದರೆ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ಬ್ಯಾಟರ್ 600 ಸಿಕ್ಸ್ಗಳನ್ನು ಬಾರಿಸಿಲ್ಲ. ಇದೀಗ ಆರು ನೂರು ಸಿಕ್ಸರ್ಗಳ ಸರದಾರ ಎನಿಸಿಕೊಳ್ಳಲು ರೋಹಿತ್ ಶರ್ಮಾಗೆ ಬೇಕಿರುವುದು ಬೆರಳಣಿಕೆಯ ಬಿಗ್ ಹಿಟ್ಗಳು ಮಾತ್ರ.

ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಈ ಸರಣಿಯಲ್ಲಿ ರೋಹಿತ್ ಶರ್ಮಾ 18 ಸಿಕ್ಸ್ಗಳನ್ನು ಬಾರಿಸಿದರೆ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸಿಕ್ಸ್ಗಳನ್ನು ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಮೂರು ಮಾದರಿ ಕ್ರಿಕೆಟ್‌ನಲ್ಲಿ 486 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಇದುವರೆಗೆ 582 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ 600 ಸಿಕ್ಸ್ಗಳೊಂದಿಗೆ ಹೊಸ ಇತಿಹಾಸ ಬರೆಯುವ ಅವಕಾಶ ರೋಹಿತ್ ಶರ್ಮಾ ಮುಂದಿದ್ದು, ಈ ವಿಶ್ವ ದಾಖಲೆ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲೇ ಮೂಡಿ ಬರಲಿದೆಯಾ ಕಾದು ನೋಡಬೇಕಿದೆ.
