ಜಸ್ಟ್​ 22 ರನ್ಸ್​: ವಿಶ್ವ ದಾಖಲೆ ಹೊಸ್ತಿಲಲ್ಲಿ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Sep 30, 2023 | 8:59 PM

Rohit Sharma: ವಿಶೇಷ ಎಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 22 ರನ್​ಗಳಿಸಿದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಅದು ಕೂಡ ವಿಶ್ವಕಪ್ ವಿಶ್ವ ದಾಖಲೆ ಎಂಬುದು ಮತ್ತೊಂದು ವಿಶೇಷ.

1 / 5
ಏಕದಿನ ವಿಶ್ವಕಪ್​ ರಂಗೇರಲು ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

2 / 5
ವಿಶೇಷ ಎಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 22 ರನ್​ಗಳಿಸಿದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಅದು ಕೂಡ ವಿಶ್ವಕಪ್ ವಿಶ್ವ ದಾಖಲೆ ಎಂಬುದು ಮತ್ತೊಂದು ವಿಶೇಷ.

3 / 5
ಅಂದರೆ ಏಕದಿನ ವಿಶ್ವಕಪ್​ನಲ್ಲಿ ಅತ್ಯಂತ ವೇಗವಾಗಿ 1000 ರನ್ ಕಲೆಹಾಕಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಮಾಸ್ಟರ್ ಬ್ಲಾಸ್ಟರ್ ಕೇವಲ 20 ಇನಿಂಗ್ಸ್​ಗಳ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಸಾವಿರ ರನ್ ಪೂರೈಸಿ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ ಬೇಕಿರುವುದು ಕೇವಲ 22 ರನ್​ಗಳು ಮಾತ್ರ. ಸದ್ಯ 17 ಇನಿಂಗ್ಸ್​ಗಳಲ್ಲಿ  978 ರನ್​ ಕಲೆಹಾಕಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಅಥವಾ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಒಟ್ಟು 22 ರನ್ ಕಲೆಹಾಕಿದರೆ ಏಕದಿನ ವಿಶ್ವಕಪ್​ನಲ್ಲಿ ಅತೀ ವೇಗವಾಗಿ 1000 ರನ್ ಪೂರೈಸಿದ ವಿಶ್ವ ದಾಖಲೆ ಹಿಟ್​ಮ್ಯಾನ್ ಪಾಲಾಗಲಿದೆ.

5 / 5
ಇನ್ನು ಏಕದಿನ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಸಾವಿರ ರನ್ ಪೂರೈಸಲು 25 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದರು. ಇದೀಗ ಕೇವಲ ಎರಡು ವಿಶ್ವಕಪ್ (2015, 2019) ಮೂಲಕ ಸಾವಿರ ರನ್ ಪೂರೈಸಿ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ ರೋಹಿತ್ ಶರ್ಮಾ.