AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 5th Test: 2019 ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ: ಆರಂಭಿಕನಾಗಿ ರೋಹಿತ್ ಶರ್ಮಾ ನೂತನ ದಾಖಲೆ

Rohit Sharma Record: ರೋಹಿತ್ ಶರ್ಮಾ 58ನೇ ಓವರ್​ನ ಕೊನೆಯ ಎಸೆತದಲ್ಲಿ ರನ್ ಗಳಿಸಿ ಶತಕ ಪೂರೈಸಿದರು. ಅವರು 154 ಎಸೆತಗಳಲ್ಲಿ 13 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಬಾರಿಸಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಜೊತೆಗೆ ಹಲವು ದಾಖಲೆ ಕೂಡ ನಿರ್ಮಿಸಿದರು.

Vinay Bhat
|

Updated on: Mar 09, 2024 | 9:52 AM

Share
ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅದ್ಭುತ ಶತಕದ ಕೊಡುಗೆ ನೀಡಿದರು. ಈ ಸರಣಿಯಲ್ಲಿ ರೋಹಿತ್ ಅವರ ಎರಡನೇ ಶತಕ ಇದಾಗಿದ್ದು, ಈ ಮೂಲಕ ಟೀಮ್ ಇಂಡಿಯಾ ದೊಡ್ಡ ಸ್ಕೋರ್ ದಾಖಲಿಸುವ ಭರವಸೆಯಲ್ಲಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 8 ವಿಕೆಟ್ ಕಳೆದುಕೊಂಡು 473 ರನ್ ಗಳಿಸಿತ್ತು.

1 / 5
ರೋಹಿತ್ 58ನೇ ಓವರ್​ನ ಕೊನೆಯ ಎಸೆತದಲ್ಲಿ ರನ್ ಗಳಿಸಿ ಶತಕ ಪೂರೈಸಿದರು. ಅವರು 154 ಎಸೆತಗಳಲ್ಲಿ 13 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಬಾರಿಸಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದ ರೋಹಿತ್ ಸ್ಫೋಟಕ ಆಟವಾಡಿದರು. ಜೊತೆಗೆ ಹಲವು ದಾಖಲೆ ಕೂಡ ನಿರ್ಮಿಸಿದರು.

2 / 5
ಈ ಶತಕದೊಂದಿಗೆ, ರೋಹಿತ್ 2019 ರಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆರಂಭಿಕ ಆಟಗಾರರಾದರು. ರೋಹಿತ್ 2019 ರಿಂದ ಆರಂಭಿಕರಾಗಿ ಒಂಬತ್ತು ಶತಕಗಳನ್ನು ಗಳಿಸಿದ್ದಾರೆ. ಈ ವಿಚಾರದಲ್ಲಿ ಶ್ರೀಲಂಕಾದ ದಿಮುತ್ ಕರುಣಾರತ್ನೆಗೆ ಸಮನಾಗಿದ್ದ ರೋಹಿತ್ ಇದೀಗ ಅವರನ್ನು ಹಿಂದಿಕ್ಕಿದ್ದಾರೆ. ಕರುಣಾರತ್ನೆ 2019 ರಿಂದ ಎಂಟು ಶತಕಗಳನ್ನು ಗಳಿಸಿದ್ದಾರೆ.

3 / 5
ರೋಹಿತ್ ಮತ್ತು ಕರುಣಾರತ್ನ ನಂತರ ಡೇವಿಡ್ ವಾರ್ನರ್, ಟಾಮ್ ಲಾಥಮ್, ಉಸ್ಮಾನ್ ಖ್ವಾಜಾ ಇದ್ದಾರೆ. ಮೂವರೂ ತಲಾ ಐದು ಶತಕ ಬಾರಿಸಿದ್ದಾರೆ. ರೋಹಿತ್ ನಂತರ ಗಿಲ್ ಕೂಡ ಶತಕ ಪೂರೈಸಿದರು. ಇವರಿಬ್ಬರು ಶತಕದ ಜೊತೆಯಾಟ ಆಡಿದರು. ಇಬ್ಬರೂ ತಂಡದ ಮೊತ್ತವನ್ನು 250ರ ಗಡಿ ದಾಟಿಸಿ ಬಿಟ್ಟರು.

4 / 5
ರೋಹಿತ್ ಇಂಗ್ಲೆಂಡ್ ಸರಣಿಯ ಆರಂಭಿಕ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರಲಿಲ್ಲ. ಹೈದರಾಬಾದ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 24 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 39 ರನ್ ಗಳಿಸಿದ್ದರು. ಎರಡನೇ ಪಂದ್ಯದಲ್ಲಿ ಮೊದಲ ಇನಿಂಗ್ಸ್‌ನಲ್ಲಿ 14 ರನ್ ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 13 ರನ್ ಗಳಿಸಿದ್ದರು. ಇದಾದ ಬಳಿಕ ರಾಜ್ ಕೋಟ್ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿ ಫಾರ್ಮ್​ಗೆ ಬಂದಿದ್ದರು.

5 / 5
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!