AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಏಕದಿನದಲ್ಲಿ 37 ವರ್ಷಗಳ ಹಳೆಯ ದಾಖಲೆ ಮುರಿದ ರೋಹಿತ್ ಶರ್ಮಾ

Rohit Sharma Breaks 37-Year ODI Record: ಭಾರತ-ಅಫ್ಘಾನಿಸ್ತಾನ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 37 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿದ ರೋಹಿತ್ ಭಾರತದ ಪರ ಏಕದಿನ ಆಡಿದ ಅತ್ಯಂತ ಹಿರಿಯ ಆಟಗಾರರಾಗಿ ಮೊಹಿಂದರ್ ಅಮರನಾಥ್ ದಾಖಲೆಯನ್ನು ಹಿಂದಿಕ್ಕಿದರು. ಅವರು ಆರಂಭಿಕನಾಗಿ 16,000 ರನ್‌ಗಳತ್ತಲೂ ಸಾಗುತ್ತಿದ್ದಾರೆ, ಸೆಹ್ವಾಗ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯರಾಗಲಿದ್ದಾರೆ.

ಪೃಥ್ವಿಶಂಕರ
|

Updated on: Jun 13, 2026 | 6:59 PM

Share
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿಯುವ ಮೂಲಕ ಮಾಜಿ ನಾಯಕ ರೋಹಿತ್ ಶರ್ಮಾ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು (PC-PTI).

1 / 5
ಮೊದಲ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ರೋಹಿತ್ ಶರ್ಮಾ, ಭಾರತದ ಪರ ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನು ಆಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಪಂದ್ಯದೊಂದಿಗೆ, ರೋಹಿತ್ ಶರ್ಮಾ ಮಾಜಿ ಲೆಜೆಂಡರಿ ಆಲ್‌ರೌಂಡರ್ ಮೊಹಿಂದರ್ ಅಮರನಾಥ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು (PC-PTI).

2 / 5
ಮೊಹಿಂದರ್ ಅಮರನಾಥ್ ಭಾರತ ಪರ ಕೊನೆಯ ಏಕದಿನ ಪಂದ್ಯ ಆಡಿದಾಗ ಅವರ ವಯಸ್ಸು 39 ವರ್ಷ 36 ದಿನವಾಗಿತ್ತು. ಇದೀಗ ರೋಹಿತ್ ಶರ್ಮಾ 39 ವರ್ಷ 44 ದಿನದಲ್ಲಿ ಏಕದಿನ ಪಂದ್ಯವನ್ನಾಡುವ ಮೂಲಕ ಈ ಅಪರೂಪದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ (PC-PTI).

3 / 5
ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ಮೈಲಿಗಲ್ಲು ದಾಟಿರುವ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಿದರೆ ಮತ್ತೊಂದು ದಾಖಲೆಯನ್ನು ನಿರ್ಮಿಸಲಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ 6 ರನ್​ಗಳನ್ನು ಬಾರಿಸಿದರೆ, ಆರಂಭಿಕನಾಗಿ 16 ಸಾವಿರ ರನ್​ಗಳನ್ನು ಪೂರೈಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರನಾಗಲಿದ್ದಾರೆ (PC-PTI).

4 / 5
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಪ್ರಸ್ತುತ ಮುಲ್ತಾನ್ ಸುಲ್ತಾನ್ ವೀರೇಂದ್ರ ಸೆಹ್ವಾಗ್ ಹೊಂದಿದ್ದಾರೆ. ಸೆಹ್ವಾಗ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಆರಂಭಿಕ ಆಟಗಾರನಾಗಿ ಒಟ್ಟು 16,119 ರನ್ ಗಳಿಸಿದ್ದಾರೆ (PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್

ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ

ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್

ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?

ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ

ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ

ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ