- TV9 Kannada Photo gallery Cricket photos Rohit Sharma Breaks 37-Year ODI Record: Oldest Indian Player in India-Afghan Match
IND vs AFG: ಏಕದಿನದಲ್ಲಿ 37 ವರ್ಷಗಳ ಹಳೆಯ ದಾಖಲೆ ಮುರಿದ ರೋಹಿತ್ ಶರ್ಮಾ
Rohit Sharma Breaks 37-Year ODI Record: ಭಾರತ-ಅಫ್ಘಾನಿಸ್ತಾನ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 37 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿದ ರೋಹಿತ್ ಭಾರತದ ಪರ ಏಕದಿನ ಆಡಿದ ಅತ್ಯಂತ ಹಿರಿಯ ಆಟಗಾರರಾಗಿ ಮೊಹಿಂದರ್ ಅಮರನಾಥ್ ದಾಖಲೆಯನ್ನು ಹಿಂದಿಕ್ಕಿದರು. ಅವರು ಆರಂಭಿಕನಾಗಿ 16,000 ರನ್‌ಗಳತ್ತಲೂ ಸಾಗುತ್ತಿದ್ದಾರೆ, ಸೆಹ್ವಾಗ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯರಾಗಲಿದ್ದಾರೆ.
Updated on: Jun 13, 2026 | 6:59 PM

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿಯುವ ಮೂಲಕ ಮಾಜಿ ನಾಯಕ ರೋಹಿತ್ ಶರ್ಮಾ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು (PC-PTI).

ಮೊದಲ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ರೋಹಿತ್ ಶರ್ಮಾ, ಭಾರತದ ಪರ ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನು ಆಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಪಂದ್ಯದೊಂದಿಗೆ, ರೋಹಿತ್ ಶರ್ಮಾ ಮಾಜಿ ಲೆಜೆಂಡರಿ ಆಲ್‌ರೌಂಡರ್ ಮೊಹಿಂದರ್ ಅಮರನಾಥ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು (PC-PTI).

ಮೊಹಿಂದರ್ ಅಮರನಾಥ್ ಭಾರತ ಪರ ಕೊನೆಯ ಏಕದಿನ ಪಂದ್ಯ ಆಡಿದಾಗ ಅವರ ವಯಸ್ಸು 39 ವರ್ಷ 36 ದಿನವಾಗಿತ್ತು. ಇದೀಗ ರೋಹಿತ್ ಶರ್ಮಾ 39 ವರ್ಷ 44 ದಿನದಲ್ಲಿ ಏಕದಿನ ಪಂದ್ಯವನ್ನಾಡುವ ಮೂಲಕ ಈ ಅಪರೂಪದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ (PC-PTI).

ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ಮೈಲಿಗಲ್ಲು ದಾಟಿರುವ ರೋಹಿತ್ ಶರ್ಮಾ ಬ್ಯಾಟಿಂಗ್ನಲ್ಲಿ ಕಮಾಲ್ ಮಾಡಿದರೆ ಮತ್ತೊಂದು ದಾಖಲೆಯನ್ನು ನಿರ್ಮಿಸಲಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ 6 ರನ್ಗಳನ್ನು ಬಾರಿಸಿದರೆ, ಆರಂಭಿಕನಾಗಿ 16 ಸಾವಿರ ರನ್ಗಳನ್ನು ಪೂರೈಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರನಾಗಲಿದ್ದಾರೆ (PC-PTI).

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಪ್ರಸ್ತುತ ಮುಲ್ತಾನ್ ಸುಲ್ತಾನ್ ವೀರೇಂದ್ರ ಸೆಹ್ವಾಗ್ ಹೊಂದಿದ್ದಾರೆ. ಸೆಹ್ವಾಗ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಆರಂಭಿಕ ಆಟಗಾರನಾಗಿ ಒಟ್ಟು 16,119 ರನ್ ಗಳಿಸಿದ್ದಾರೆ (PC-PTI).

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



