
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿಯುವ ಮೂಲಕ ಮಾಜಿ ನಾಯಕ ರೋಹಿತ್ ಶರ್ಮಾ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು (PC-PTI).

ಮೊದಲ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ರೋಹಿತ್ ಶರ್ಮಾ, ಭಾರತದ ಪರ ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನು ಆಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಪಂದ್ಯದೊಂದಿಗೆ, ರೋಹಿತ್ ಶರ್ಮಾ ಮಾಜಿ ಲೆಜೆಂಡರಿ ಆಲ್‌ರೌಂಡರ್ ಮೊಹಿಂದರ್ ಅಮರನಾಥ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು (PC-PTI).

ಮೊಹಿಂದರ್ ಅಮರನಾಥ್ ಭಾರತ ಪರ ಕೊನೆಯ ಏಕದಿನ ಪಂದ್ಯ ಆಡಿದಾಗ ಅವರ ವಯಸ್ಸು 39 ವರ್ಷ 36 ದಿನವಾಗಿತ್ತು. ಇದೀಗ ರೋಹಿತ್ ಶರ್ಮಾ 39 ವರ್ಷ 44 ದಿನದಲ್ಲಿ ಏಕದಿನ ಪಂದ್ಯವನ್ನಾಡುವ ಮೂಲಕ ಈ ಅಪರೂಪದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ (PC-PTI).

ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ಮೈಲಿಗಲ್ಲು ದಾಟಿರುವ ರೋಹಿತ್ ಶರ್ಮಾ ಬ್ಯಾಟಿಂಗ್ನಲ್ಲಿ ಕಮಾಲ್ ಮಾಡಿದರೆ ಮತ್ತೊಂದು ದಾಖಲೆಯನ್ನು ನಿರ್ಮಿಸಲಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ 6 ರನ್ಗಳನ್ನು ಬಾರಿಸಿದರೆ, ಆರಂಭಿಕನಾಗಿ 16 ಸಾವಿರ ರನ್ಗಳನ್ನು ಪೂರೈಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರನಾಗಲಿದ್ದಾರೆ (PC-PTI).

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಪ್ರಸ್ತುತ ಮುಲ್ತಾನ್ ಸುಲ್ತಾನ್ ವೀರೇಂದ್ರ ಸೆಹ್ವಾಗ್ ಹೊಂದಿದ್ದಾರೆ. ಸೆಹ್ವಾಗ್ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಆರಂಭಿಕ ಆಟಗಾರನಾಗಿ ಒಟ್ಟು 16,119 ರನ್ ಗಳಿಸಿದ್ದಾರೆ (PC-PTI).