AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಏಕದಿನದಲ್ಲಿ ಅತಿ ಹೆಚ್ಚು ರನ್; ಪಾಕ್ ಮಾಜಿ ನಾಯಕನನ್ನು ಹಿಂದಿಕ್ಕಿದ ರೋಹಿತ್

Rohit Sharma Breaks ODI Run Record:ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ, ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ 26 ರನ್ ಗಳಿಸುವ ಮೂಲಕ ಅವರು ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಪಾಕಿಸ್ತಾನದ ಇಂಜಮಾಮ್-ಉಲ್-ಹಕ್ ಅವರನ್ನು ಹಿಂದಿಕ್ಕಿ 7ನೇ ಸ್ಥಾನಕ್ಕೇರಿದ್ದಾರೆ. ರೋಹಿತ್ ಇದುವರೆಗೆ 287 ಪಂದ್ಯಗಳಿಂದ 11,740ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಪೃಥ್ವಿಶಂಕರ
|

Updated on:Jul 16, 2026 | 7:19 PM

Share
ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾಗೆ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲೂ ರನ್ ಬರ ಎದುರಿಸಿದ್ದ ರೋಹಿತ್ ಕೊನೆಯ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಲಯ ಕಂಡುಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಇಂಗ್ಲೆಂಡ್‌ ವಿರುದ್ಧ ರೋಹಿತ್​ಗೆ ಲಯ ಕಂಡುಕೊಳ್ಳಲು ಸಾಧ್ಯವಾಗಿಲ್ಲ (PC-PTI).

1 / 5
ಮೊದಲ ಏಕದಿನದಲ್ಲಿ 21 ಎಸೆತಗಳನ್ನು ಎದುರಿಸಿ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾಗಿದ್ದ ರೋಹಿತ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಬರೋಬ್ಬರಿ 47 ಎಸೆತಗಳನ್ನು ಎದುರಿಸಿ 26 ರನ್ ಬಾರಿಸಿ ತಮ್ಮ ವಿಕೆಟ್ ಒಪ್ಪಿಸಿದರು. ಈ ಪಂದ್ಯದಲ್ಲೂ ರೋಹಿತ್​ಗೆ ಮುಕ್ತವಾಗಿ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ಆದಗ್ಯೂ ಈ 26 ರನ್​ಗಳ ಇನ್ನಿಂಗ್ಸ್ ಮೂಲಕ ರೋಹಿತ್ ಏಕದಿನದಲ್ಲಿ ವಿಶೇಷ ದಾಖಲೆಯನ್ನು ನಿರ್ಮಿಸಿದರು(PC-PTI).

2 / 5
ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಇದೀಗ 8ನೇ ಸ್ಥಾನದಿಂದ ಏಳನೇ ಸ್ಥಾನಕ್ಕೇರಿದ್ದಾರೆ. ಹೀಗಾಗಿ ಇಷ್ಟು ದಿನ 7ನೇ ಸ್ಥಾನದಲ್ಲಿದ್ದ ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಇದೀಗ 8ನೇ ಸ್ಥಾನಕ್ಕೆ ಜಾರಿದ್ದಾರೆ(PC-PTI).

3 / 5
 ಇಂಜಮಾಮ್-ಉಲ್-ಹಕ್ 378 ಏಕದಿನ ಪಂದ್ಯಗಳಲ್ಲಿ 11,739 ರನ್ ಗಳಿಸಿದ್ದಾರೆ. ಈಗ, ರೋಹಿತ್ ಶರ್ಮಾ ಅವರನ್ನು ಮೀರಿಸಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ ಕೇವಲ 287 ಏಕದಿನ ಪಂದ್ಯಗಳನ್ನು ಆಡಿದ್ದು 11,740 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಶೀಘ್ರದಲ್ಲೇ ರೋಹಿತ್​ 12,000 ರನ್​ಗಳ ಗಡಿಯನ್ನು ದಾಟಲಿದ್ದಾರೆ(PC-PTI).

4 / 5
ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆನಿಸಿಕೊಂಡಿದ್ದಾರೆ. ಈ ಸ್ವರೂಪದಲ್ಲಿ ಅವರು 18,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ನಂತರದ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 14,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಸಂಗಕ್ಕಾರ ಮೂರನೇ ಸ್ಥಾನದಲ್ಲಿದ್ದಾರೆ(PC-BCCI).

5 / 5

Published On - 7:19 pm, Thu, 16 July 26

Follow Us
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?

ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​

ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ

ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ

ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ