AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ ಕಡಿಮೆ, ದಾಖಲೆ ಮಾತ್ರ ದೊಡ್ಡದು; ರೋಹಿತ್ ಅಬ್ಬರಕ್ಕೆ ಫ್ಯಾನ್ಸ್ ಫಿದಾ

ನ್ಯೂಜಿಲೆಂಡ್ ವಿರುದ್ಧದ ODI ಸರಣಿಯಲ್ಲಿ ರೋಹಿತ್ ಶರ್ಮಾ ಎರಡು ಸಿಕ್ಸರ್ ಸಿಡಿಸಿ ಮಹತ್ವದ ದಾಖಲೆಗಳನ್ನು ನಿರ್ಮಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು (51) ಸಿಕ್ಸರ್‌ಗಳ ದಾಖಲೆ ಬರೆದು ಅಫ್ರಿದಿಯವರನ್ನು ಹಿಂದಿಕ್ಕಿದರು. ಅಲ್ಲದೆ, ಮೂರು ಬೇರೆ ಬೇರೆ ತಂಡಗಳ ವಿರುದ್ಧ ತಲಾ 50ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಗಳಿಸಿದ ವಿಶ್ವದ ಎರಡನೇ ಬ್ಯಾಟರ್ ಎನಿಸಿದ್ದಾರೆ.

ಪೃಥ್ವಿಶಂಕರ
|

Updated on: Nov 07, 2026 | 3:31 PM

Share
ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾಗೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಇದುವರೆಗೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ರೋಹಿತ್  ಎರಡನೇ ಏಕದಿನ ಪಂದ್ಯದಲ್ಲಿಯೂ 23 ರನ್​ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಅವರ ಈ ಚುಟುಕು ಇನ್ನಿಂಗ್ಸ್ ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಲು ನೆರವಾಗಿದೆ(PC-PTI).

1 / 5
ಈ ಪಂದ್ಯದಲ್ಲಿ 23 ರನ್‌ಗಳ ಇನ್ನಿಂಗ್ಸ್ ಆಡಿದ ರೋಹಿತ್, ಎರಡು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದರು. ಈ ಸಿಕ್ಸರ್‌ಗಳೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಮುರಿದಿದ್ದಾರೆ. ಅಫ್ರಿದಿ ತಮ್ಮ ವೃತ್ತಿಜೀವನದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ್ದರು(PC-PTI).

2 / 5
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ವಿಶ್ವ ದಾಖಲೆಯನ್ನೂ ಸರಿಗಟ್ಟಿದ್ದಾರೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮೂರು ವಿಭಿನ್ನ ತಂಡಗಳ ವಿರುದ್ಧ ತಲಾ 50 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ಎರಡನೇ ಬ್ಯಾಟರ್ ಎಂಬ ಸಾಧನೆ ಮಾಡಿದ್ದಾರೆ. ಈ ಮೂಲಕ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ(PC-PTI).

3 / 5
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಎರಡು ಸಿಕ್ಸರ್ ಸಿಡಿಸುವ ಮೂಲಕ ರೋಹಿತ್ ಈ ತಂಡದ ವಿರುದ್ಧ ಒಟ್ಟು 51 ಸಿಕ್ಸರ್‌ಗಳನ್ನು ಪೂರೈಸಿದ್ದಾರೆ. ಇದಕ್ಕೂ ಮೊದಲು ರೋಹಿತ್ ಆಸ್ಟ್ರೇಲಿಯಾ ವಿರುದ್ಧ 93 ಹಾಗೂ ಶ್ರೀಲಂಕಾ ವಿರುದ್ಧ 58 ಸಿಕ್ಸರ್‌ಗಳನ್ನು ಬಾರಿಸಿದ್ದರು(PC-PTI).

4 / 5
ವೆಲ್ಲಿಂಗ್ಟನ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ರೋಹಿತ್ ಹೆಸರಿನಲ್ಲಿ ನ್ಯೂಜಿಲೆಂಡ್ ವಿರುದ್ಧ 49 ಸಿಕ್ಸರ್‌ಗಳಿದ್ದವು. ಆದರೆ ಈ ಪಂದ್ಯದಲ್ಲಿ ಎರಡು ಸಿಕ್ಸರ್ ಸಿಡಿಸುವ ಮೂಲಕ ಒಟ್ಟು 51 ಸಿಕ್ಸರ್‌ಗಳನ್ನು ಪೂರೈಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ 50 ಸಿಕ್ಸರ್‌ಗಳೊಂದಿಗೆ ಶಾಹಿದ್ ಅಫ್ರಿದಿ ಮೊದಲ ಸ್ಥಾನದಲ್ಲಿದ್ದರು. ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ 45 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ

ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!

ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್

ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ

ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ

ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !

ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!

ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್ ಮಾಜಿ MLC, ಬಿಜೆಪಿ MLA ​ಹೈಡ್ರಾಮಾ!

ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ

ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್