
ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾಗೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಇದುವರೆಗೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ರೋಹಿತ್ ಎರಡನೇ ಏಕದಿನ ಪಂದ್ಯದಲ್ಲಿಯೂ 23 ರನ್‌ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಅವರ ಈ ಚುಟುಕು ಇನ್ನಿಂಗ್ಸ್ ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಲು ನೆರವಾಗಿದೆ(PC-PTI).
ಈ ಪಂದ್ಯದಲ್ಲಿ 23 ರನ್‌ಗಳ ಇನ್ನಿಂಗ್ಸ್ ಆಡಿದ ರೋಹಿತ್, ಎರಡು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದರು. ಈ ಸಿಕ್ಸರ್‌ಗಳೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಮುರಿದಿದ್ದಾರೆ. ಅಫ್ರಿದಿ ತಮ್ಮ ವೃತ್ತಿಜೀವನದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ್ದರು(PC-PTI).
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ವಿಶ್ವ ದಾಖಲೆಯನ್ನೂ ಸರಿಗಟ್ಟಿದ್ದಾರೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮೂರು ವಿಭಿನ್ನ ತಂಡಗಳ ವಿರುದ್ಧ ತಲಾ 50 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ಎರಡನೇ ಬ್ಯಾಟರ್ ಎಂಬ ಸಾಧನೆ ಮಾಡಿದ್ದಾರೆ. ಈ ಮೂಲಕ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ(PC-PTI).
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಎರಡು ಸಿಕ್ಸರ್ ಸಿಡಿಸುವ ಮೂಲಕ ರೋಹಿತ್ ಈ ತಂಡದ ವಿರುದ್ಧ ಒಟ್ಟು 51 ಸಿಕ್ಸರ್‌ಗಳನ್ನು ಪೂರೈಸಿದ್ದಾರೆ. ಇದಕ್ಕೂ ಮೊದಲು ರೋಹಿತ್ ಆಸ್ಟ್ರೇಲಿಯಾ ವಿರುದ್ಧ 93 ಹಾಗೂ ಶ್ರೀಲಂಕಾ ವಿರುದ್ಧ 58 ಸಿಕ್ಸರ್‌ಗಳನ್ನು ಬಾರಿಸಿದ್ದರು(PC-PTI).
ವೆಲ್ಲಿಂಗ್ಟನ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ರೋಹಿತ್ ಹೆಸರಿನಲ್ಲಿ ನ್ಯೂಜಿಲೆಂಡ್ ವಿರುದ್ಧ 49 ಸಿಕ್ಸರ್‌ಗಳಿದ್ದವು. ಆದರೆ ಈ ಪಂದ್ಯದಲ್ಲಿ ಎರಡು ಸಿಕ್ಸರ್ ಸಿಡಿಸುವ ಮೂಲಕ ಒಟ್ಟು 51 ಸಿಕ್ಸರ್‌ಗಳನ್ನು ಪೂರೈಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ 50 ಸಿಕ್ಸರ್‌ಗಳೊಂದಿಗೆ ಶಾಹಿದ್ ಅಫ್ರಿದಿ ಮೊದಲ ಸ್ಥಾನದಲ್ಲಿದ್ದರು. ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ 45 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ(PC-PTI).