Rohit Sharma: ಹಿಟ್ಮ್ಯಾನ್ ಅಬ್ಬರಕ್ಕೆ 73 ವರ್ಷಗಳ ಹಳೆಯ ದಾಖಲೆ ಉಡೀಸ್
TV9 Web | Updated By: ಝಾಹಿರ್ ಯೂಸುಫ್
Updated on:
Feb 17, 2024 | 9:23 AM
Rohit Sharma's Record: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ರೋಹಿತ್ ಶರ್ಮಾ 73 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ. ಅದು ಕೂಡ ಭಾರತ ತಂಡದ ಮಾಜಿ ನಾಯಕನ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
1 / 6
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭಾರತದ ಮಾಜಿ ನಾಯಕನ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 6
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 196 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ 131 ರನ್ ಬಾರಿಸಿ ಮಿಂಚಿದ್ದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಶತಕ ಬಾರಿಸಿದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಹಿಟ್ಮ್ಯಾನ್ ಪಾಲಾಯಿತು.
3 / 6
ಇದಕ್ಕೂ ಮುನ್ನ ಈ ದಾಖಲೆ ಭಾರತ ತಂಡದ ಮಾಜಿ ನಾಯಕ ವಿಜಯ್ ಹಝಾರೆ ಹೆಸರಿನಲ್ಲಿತ್ತು. 1951 ರಲ್ಲಿ 36 ವರ್ಷ, 278 ದಿನಗಳ ವಯಸ್ಸಿನ ವಿಜಯ್ ಹಝಾರೆ ಇಂಗ್ಲೆಂಡ್ ವಿರುದ್ಧ ಶತಕ ಬಾರಿಸಿ ದಾಖಲೆ ಬರೆದಿದ್ದರು.
4 / 6
ಇದೀಗ 36 ವರ್ಷ, 291 ದಿನಗಳ ವಯಸ್ಸಿನ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಶತಕ ಬಾರಿಸಿದ ಅತ್ಯಂತ ಹಿರಿಯ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ.
5 / 6
ಅಷ್ಟೇ ಅಲ್ಲದೆ ಮೂರು ಸ್ವರೂಪಗಳಲ್ಲೂ ಶತಕ ಸಿಡಿಸಿದ ಭಾರತದ ಹಿರಿಯ ನಾಯಕ ಎಂಬ ಹೆಗ್ಗಳಿಕೆಗೂ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಹಿಟ್ಮ್ಯಾನ್ ತಮ್ಮ 36ನೇ ವಯಸ್ಸಿನಲ್ಲಿ ಏಕದಿನ, ಟಿ20 ಮತ್ತು ಟೆಸ್ಟ್ ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಮೂರು ಮಾದರಿಯಲ್ಲೂ ಶತಕ ಸಿಡಿಸಿದ ಭಾರತದ ಅತ್ಯಂತ ಹಿರಿಯ ಆಟಗಾರ/ನಾಯಕ ಎಂಬ ವಿಶೇಷ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.
6 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ (112) ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 445 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು ಬೆನ್ ಡಕೆಟ್ (133) ಶತಕದ ನೆರವಿನಿಂದ 2ನೇ ದಿದನಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿದೆ.