ಏಕದಿನ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಯುಗಾಂತ್ಯ?

Updated on: Jul 12, 2025 | 7:32 AM

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ಅಥವಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೂ ಮುನ್ನ ಭಾರತ ಏಕದಿನ ತಂಡದ ನಾಯಕ ಬದಲಾಗುವ ಸಾಧ್ಯತೆಯಿದೆ. ಅಂದರೆ ಪ್ರಸ್ತುತ ನಾಯಕ ರೋಹಿತ್ ಶರ್ಮಾ ಅವರನ್ನು ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಸುವುದು ಬಹುತೇಕ ಖಚಿತ.

1 / 5
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮುಕ್ತಾಯದ ಬೆನ್ನಲ್ಲೇ ಭಾರತ ಏಕದಿನ ತಂಡಕ್ಕೆ ಹೊಸ ನಾಯಕನ್ನು ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ಏಕದಿನ ತಂಡದ ನಾಯಕರಾಗಿರುವ ರೋಹಿತ್ ಶರ್ಮಾ (Rohit Sharma) ಅವರನ್ನು ನಾಯಕತ್ವದಿಂದ ಕೆಳಗಿಳಿಸಲಿದ್ದು, ಅವರ ಬದಲಿಗೆ ಯುವ ಆಟಗಾರನಿಗೆ ಕ್ಯಾಪ್ಟನ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
38 ವರ್ಷದ ರೋಹಿತ್ ಶರ್ಮಾ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇನ್ನುಳಿದಿರುವುದು ಏಕದಿನ ಕ್ರಿಕೆಟ್​ನಲ್ಲಿ ಮಾತ್ರ. ಆದರೆ ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಲು ಹಿಟ್​ಮ್ಯಾನ್​ಗೆ ಬಿಸಿಸಿಐ ಸೂಚಿಸಿದ್ದರು ಎನ್ನಲಾಗಿದೆ. ಇದಾಗ್ಯೂ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯಲು ಬಯಸಿದ್ದಾರೆ. ಅಲ್ಲದೆ 2027ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಗುರಿಯನ್ನು ಹೊಂದಿದ್ದಾರೆ.

3 / 5
ಆದರೆ ಅಷ್ಟರಲ್ಲಿ ರೋಹಿತ್ ಶರ್ಮಾ ಅವರ ವಯಸ್ಸು 40 ದಾಟಲಿದೆ. ಅಷ್ಟೇ ಅಲ್ಲದೆ ಅಲ್ಲಿಯವರೆಗೆ ಅವರು ಫಿಟ್​ ಆಗಿರಲಿದ್ದಾರೆ ಅಥವಾ ಫಾರ್ಮ್ ಉಳಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಖಚಿತತೆ ಇಲ್ಲ. ಹೀಗಾಗಿ ಮುಂಬರುವ ಸರಣಿಗೂ ಮುನ್ನ ಭಾರತ ಏಕದಿನ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತಿಸಿದೆ.

4 / 5
ಅದರಂತೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಏಕದಿನ ತಂಡದ ನೂತನ ನಾಯಕನ ಘೋಷಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಯುವ ನಾಯಕ ಮುನ್ನಡೆಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

5 / 5
ಈ ಯುವ ನಾಯಕ ಯಾರೆಂಬ ಪ್ರಶ್ನೆಗೆ ಸದ್ಯ ಕೇಳಿ ಬರುತ್ತಿರುವ ಉತ್ತರ ಶುಭ್​ಮನ್ ಗಿಲ್. ಮುಂಬರುವ ಏಕದಿನ ವಿಶ್ವಕಪ್​ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಗಿಲ್​ಗೆ ಕ್ಯಾಪ್ಟನ್ ಪಟ್ಟ ನೀಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳುವುದು ಬಹುತೇಕ ಕನ್ಫರ್ಮ್​ ಎನ್ನಬಹುದು.