Updated on: Jan 18, 2023 | 3:54 PM
ಹೈದರಾಬಾದ್ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಹಿಟ್ಮ್ಯಾನ್ 38 ಎಸೆತಗಳಲ್ಲಿ 4 ಫೋರ್ ಹಾಗೂ 2 ಸಿಕ್ಸ್ನೊಂದಿಗೆ 34 ರನ್ ಬಾರಿಸಿದ್ದರು.
ವಿಶೇಷ ಎಂದರೆ ಈ 2 ಸಿಕ್ಸ್ನೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಭಾರತದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಯಿತು.
ಈ ಹಿಂದೆ ಈ ರೆಕಾರ್ಡ್ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಧೋನಿ ಭಾರತದಲ್ಲಿ ಆಡಿದ ಏಕದಿನ ಪಂದ್ಯಗಳಲ್ಲಿ ಒಟ್ಟು 123 ಸಿಕ್ಸ್ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿದು ರೋಹಿತ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಸದ್ಯ ಭಾರತದಲ್ಲಿ ಕಣಕ್ಕಿಳಿದ ಏಕದಿನ ಇನಿಂಗ್ಸ್ಗಳಲ್ಲಿ 125 ಸಿಕ್ಸ್ ಬಾರಿಸುವ ಮೂಲಕ ಹಿಟ್ಮ್ಯಾನ್ ಅಗ್ರಸ್ಥಾನಕ್ಕೇರಿದ್ದಾರೆ. ವಿಶೇಷ ಎಂದರೆ ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿದೆ.
ರೋಹಿತ್ ಶರ್ಮಾ 239 ಏಕದಿನ ಇನಿಂಗ್ಸ್ಗಳಲ್ಲಿ ಒಟ್ಟು 265 ಸಿಕ್ಸ್ ಬಾರಿಸಿದ್ದಾರೆ. ಹಾಗೆಯೇ ಏಕದಿನ ಕ್ರಿಕೆಟ್ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಹಿಟ್ಮ್ಯಾನ್ 4ನೇ ಸ್ಥಾನದಲ್ಲಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಶಾಹಿದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 369 ಇನಿಂಗ್ಸ್ನಲ್ಲಿ ಒಟ್ಟು 351 ಸಿಕ್ಸ್ ಬಾರಿಸಿದ್ದರು.