- Kannada News Photo gallery Cricket photos Rohit Sharma overtakes Virat Kohli to become 2nd most successful captain
Rohit Sharma: ನಾಯಕನಾಗಿ ಕಿಂಗ್ ಕೊಹ್ಲಿಯ ದಾಖಲೆ ಮುರಿದ ರೋಹಿತ್ ಶರ್ಮಾ
Rohit Sharma overtakes Virat Kohli: ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.
Updated on: Sep 26, 2022 | 12:05 PM

ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

ಅಂದರೆ ಟಿ20 ಕ್ರಿಕೆಟ್ನಲ್ಲಿ ಭಾರತ ತಂಡದ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಇದೀಗ ಹಿಟ್ಮ್ಯಾನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಬುದು ವಿಶೇಷ.

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತ ತಂಡವನ್ನು 50 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು 16 ಪಂದ್ಯಗಳಲ್ಲಿ ಸೋತರೆ, 2 ಪಂದ್ಯಗಳು ಟೈ ಆಗಿತ್ತು. ಹಾಗೆಯೇ ಮತ್ತೆರೆಡು ಪಂದ್ಯಗಳಲ್ಲಿ ಫಲಿತಾಂಶ ಹೊರಬಂದಿರಲಿಲ್ಲ.

ಇದೀಗ 42 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾಗೆ 33 ಗೆಲುವು ತಂದುಕೊಟ್ಟಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 32 ಗೆಲುವುಗಳ ದಾಖಲೆಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಟೀಮ್ ಇಂಡಿಯಾದ ಟಿ20 ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. 72 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಧೋನಿ, 41 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಹಾಗೆಯೇ 28 ಪಂದ್ಯಗಳಲ್ಲಿ ಸೋತರೆ, 1 ಪಂದ್ಯವು ಟೈ ಆಗಿತ್ತು. ಹಾಗೆಯೇ ಮತ್ತೆರಡು ಪಂದ್ಯಗಳಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

ಸದ್ಯ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ 42 ಟಿ20 ಪಂದ್ಯಗಳಲ್ಲಿ 33 ಬಾರಿ ಗೆಲುವಿನ ನಗೆ ಬೀರಿದಿದ್ದಾರೆ. ಇನ್ನು ಹಿಟ್ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸೋತಿರುವುದು ಕೇವಲ 9 ಬಾರಿ ಮಾತ್ರ. ಸದ್ಯ ಧೋನಿಯ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ 9 ಗೆಲುವಿನ ಅವಶ್ಯಕತೆಯಿದ್ದು, ಅದು ಟಿ20 ವಿಶ್ವಕಪ್ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.
