Rohit Sharma: ನಾಯಕನಾಗಿ ಕಿಂಗ್ ಕೊಹ್ಲಿಯ ದಾಖಲೆ ಮುರಿದ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Sep 26, 2022 | 12:05 PM

Rohit Sharma overtakes Virat Kohli: ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

1 / 6
ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಅಂತಿಮ ಪಂದ್ಯದ ಜಯದೊಂದಿಗೆ ರೋಹಿತ್ ಶರ್ಮಾ ಭಾರತ 2ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

2 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಇದೀಗ ಹಿಟ್​ಮ್ಯಾನ್ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಬುದು ವಿಶೇಷ.

3 / 6
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತ ತಂಡವನ್ನು 50 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು 16 ಪಂದ್ಯಗಳಲ್ಲಿ ಸೋತರೆ, 2 ಪಂದ್ಯಗಳು ಟೈ ಆಗಿತ್ತು. ಹಾಗೆಯೇ ಮತ್ತೆರೆಡು ಪಂದ್ಯಗಳಲ್ಲಿ ಫಲಿತಾಂಶ ಹೊರಬಂದಿರಲಿಲ್ಲ.

4 / 6
ಇದೀಗ 42 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾಗೆ 33 ಗೆಲುವು ತಂದುಕೊಟ್ಟಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಯ 32 ಗೆಲುವುಗಳ ದಾಖಲೆಯನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ.

5 / 6
ಇನ್ನು ಟೀಮ್ ಇಂಡಿಯಾದ ಟಿ20 ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. 72 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿರುವ ಧೋನಿ, 41 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಹಾಗೆಯೇ 28 ಪಂದ್ಯಗಳಲ್ಲಿ ಸೋತರೆ, 1 ಪಂದ್ಯವು ಟೈ ಆಗಿತ್ತು. ಹಾಗೆಯೇ ಮತ್ತೆರಡು ಪಂದ್ಯಗಳಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

6 / 6
ಸದ್ಯ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ 42 ಟಿ20 ಪಂದ್ಯಗಳಲ್ಲಿ 33 ಬಾರಿ ಗೆಲುವಿನ ನಗೆ ಬೀರಿದಿದ್ದಾರೆ. ಇನ್ನು ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸೋತಿರುವುದು ಕೇವಲ 9 ಬಾರಿ ಮಾತ್ರ. ಸದ್ಯ ಧೋನಿಯ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ 9 ಗೆಲುವಿನ ಅವಶ್ಯಕತೆಯಿದ್ದು, ಅದು ಟಿ20 ವಿಶ್ವಕಪ್​ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.