IND vs AUS: ಪಿಂಕ್ ಬಾಲ್ ಟೆಸ್ಟ್ಗೆ ರಾಹುಲ್- ಜೈಸ್ವಾಲ್ ಆರಂಭಿಕರು; ರೋಹಿತ್ಗೆ ಯಾವ ಸ್ಥಾನ?
Rohit Sharma: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಭ್ಯಾಸ ಪಂದ್ಯದಲ್ಲಿ ಕೆ.ಎಲ್. ರಾಹುಲ್ ಆರಂಭಿಕರಾಗಿ ಆಡಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ ಕೇವಲ 3 ರನ್ ಗಳಿಸಿ ಔಟ್ ಆಗಿದ್ದಾರೆ. ಇದು ಮುಂಬರುವ ಟೆಸ್ಟ್ ಪಂದ್ಯಕ್ಕೆ ಆರಂಭಿಕರ ಆಯ್ಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
1 / 6
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಡಿಸೆಂಬರ್ 6 ರಿಂದ ಪಿಂಕ್ ಬಾಲ್ ಟೆಸ್ಟ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾ 2 ದಿನಗಳ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ಪ್ರಧಾನಮಂತ್ರಿ 11 ತಂಡವನ್ನು ಎದುರಿಸುತ್ತಿದೆ. ಇಂದು ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎದುರಾಳಿ ತಂಡ 240 ರನ್ ಕಲೆಹಾಕಿದೆ.
2 / 6
ಎರಡನೇ ಟೆಸ್ಟ್ಗೆ ಪ್ಲೇಯಿಂಗ್ 11 ಆಯ್ಕೆ ಮಾಡುವ ದೃಷ್ಟಿಯಿಂದ ಈ ಅಭ್ಯಾಸ ಪಂದ್ಯ ಟೀಂ ಇಂಡಿಯಾಕ್ಕೆ ಬಹಳ ಮುಖ್ಯವಾಗಿತ್ತು. ಏಕೆಂದರೆ ಮೊದಲ ಟೆಸ್ಟ್ಗೆ ಅಲಭ್ಯರಾಗಿದ್ದ ರೋಹಿತ್ ಹಾಗೂ ಗಿಲ್ ತಂಡ ಸೇರಿಕೊಂಡಿದ್ದಾರೆ. ಹೀಗಾಗಿ ಅವರ ಆಗಮನದಿಂದ ತಂಡದಲ್ಲಿ ಬದಲಾವಣೆಗಳಾಗುವುದು ಖಚಿತ. ಅದರಲ್ಲೂ ಆರಂಭಿಕರಾಗಿ ಯಾರನ್ನು ಕಣಕ್ಕಿಳಿಸಬೇಕು ಎಂಬುದು ಟೀಂ ಇಂಡಿಯಾಕ್ಕೆ ದೊಡ್ಡ ತಲೆನೋವಾಗಿದೆ.
3 / 6
ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರು ಆರಂಭಿಕರಾಗುತ್ತಾರೆ ಎಂಬುದು ಕುತೂಹಲ ಮೂಡಿಸಿತ್ತು. ಆದರೆ ಅಚ್ಚರಿಯೆಂಬಂತೆ ಇಂದು ಯಶಸ್ವಿ ಜೈಸ್ವಾಲ್ ಜೊತೆ ರೋಹಿತ್ ಬದಲಿಗೆ ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಅಂದರೆ ಮುಂದಿನ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಅವರೇ ಆರಂಭಿಕನಾಗುವ ಸಾಧ್ಯತೆಗಳಿವೆ.
4 / 6
ಅಲ್ಲದೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಜೈಸ್ವಾಲ್ ಹಾಗೂ ರಾಹುಲ್ ಉತ್ತಮ ಜೊತೆಯಾಟ ನೀಡಿದರು. ಈ ಇಬ್ಬರು ಮೊದಲ ವಿಕೆಟ್ಗೆ 75 ರನ್ಗಳ ಕಾಣಿಕೆ ನೀಡಿದರು. ಈ ವೇಳೆ ಜೈಸ್ವಾಲ್ 49 ರನ್ ಗಳಿಸಿ ಔಟಾದರೆ, ಕೆಎಲ್ ರಾಹುಲ್ ಅಜೇಯರಾಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ.
5 / 6
ಆದರೆ ಇಂದಿನ ಪಂದ್ಯದಲ್ಲಿ ಆರಂಭಿಕ ಸ್ಥಾನವನ್ನು ರಾಹುಲ್ಗೆ ಬಿಟ್ಟುಕೊಟ್ಟು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದಿದ್ದ ನಾಯಕ ರೋಹಿತ್ ಶರ್ಮಾ, ತಮ್ಮ ಕಳಪೆ ಫಾರ್ಮ್ ಅನ್ನು ಇಲ್ಲೂ ಮುಂದುವರೆಸಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಕೇವಲ 3 ರನ್ಗಳಿಗೆ ರೋಹಿತ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಇದು ತಂಡದ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ.
6 / 6
ಬರೋಬ್ಬರಿ 6 ವರ್ಷಗಳ ಬಳಿಕ ಆರಂಭಿಕ ಸ್ಥಾನವನ್ನು ಬಿಟ್ಟುಕೊಟ್ಟಿದ್ದ ರೋಹಿತ್ ಮಧ್ಯಮ ಕ್ರಮಾಂಕದಲ್ಲಿ ಅದೃಷ್ಟ ಪರೀಕ್ಷೆಗಿಳಿದು ವಿಫಲರಾಗಿದ್ದಾರೆ. ವಾಸ್ತವವಾಗಿ ರೋಹಿತ್ ಆರಂಭದಲ್ಲಿ ಟೀಂ ಇಂಡಿಯಾ ಪರ ಮಧ್ಯಮ ಕ್ರಮಾಂಕ ಅಥವಾ ಕೆಳ ಕ್ರಮಾಂಕದಲ್ಲಿ ಮಾತ್ರ ಆಡುತ್ತಿದ್ದರು. ಆದರೆ 2019 ರಿಂದ ಅವರಿಗೆ ಟೆಸ್ಟ್‌ನಲ್ಲಿ ಓಪನಿಂಗ್ ಮಾಡುವ ಅವಕಾಶ ಸಿಕ್ಕಿತ್ತು. ಅಂದಿನಿಂದ, ಅವರು ನಿರಂತರವಾಗಿ ಟೆಸ್ಟ್‌ಗಳಲ್ಲಿ ಆರಂಭಿಕರಾಗಿದ್ದಾರೆ.