Rohit Sharma: ಈವರೆಗೆ ಯಾವೊಬ್ಬ ಕ್ರಿಕೆಟಿಗ ಮಾಡಿಲ್ಲ: ವಿಶ್ವ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
TV9kannada Web Team | Edited By: Vinay Bhat
Updated on: Jul 08, 2022 | 2:14 PM
IND vs ENG 1st T20I: ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸತತ 13 ಪಂದ್ಯಗಳನ್ನು ಗೆದ್ದ ವಿಶ್ವದ ಮೊತ್ತ ಮೊದಲ ಕ್ಯಾಪ್ಟನ್ ಎಂಬ ಬಹುದೊಡ್ಡ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ. 2021ರ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ರೋಹಿತ್ ನಾಯಕತ್ವ ವಹಿಸಿದರು.
Jul 08, 2022 | 2:14 PM
ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 50 ರನ್ಗಳ ಅಮೋಘ ಗೆಲುವು ಕಂಡಿದೆ. ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಪ್ರದರ್ಶನದಿಂದ ಭಾರತ ಬೊಂಬಾಟ್ ಜಯ ಸಾಧಿಸಿದ್ದು ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದರ ನಡುವೆ ಟೀಮ್ ಇಂಡಿಯಾ ಭರ್ಜರಿ ಕಮ್ ಬ್ಯಾಕ್ ಮಾಡಿರುವ ನಾಯಕ ರೋಹಿತ್ ಶರ್ಮಾ ಬಹುದೊಡ್ಡ ದಾಖಲೆ ನಿರ್ಮಿಸಿದ್ದಾರೆ.
1 / 6
ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸತತ 13 ಪಂದ್ಯಗಳನ್ನು ಗೆದ್ದ ವಿಶ್ವದ ಮೊತ್ತ ಮೊದಲ ಕ್ಯಾಪ್ಟನ್ ಎಂಬ ಬಹುದೊಡ್ಡ ದಾಖಲೆಯನ್ನು ರೋಹಿತ್ ನಿರ್ಮಿಸಿದ್ದಾರೆ. 2021ರ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ರೋಹಿತ್ ನಾಯಕತ್ವ ವಹಿಸಿದರು.
2 / 6
ಇದರ ಜೊತೆಗೆ ಟೀಮ್ ಇಂಡಿಯಾ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ 1000 ರನ್ಗಳನ್ನು ಪೂರೈಸಿದ ಮೂರನೇ ಆಟಗಾರ ಎನಿಸಿಕೊಂಡ ರೋಹಿತ್, ನಾಯಕನಾಗಿ ಅಂತರರಾಷ್ಟ್ರೀಯ ತಂಡದ ಪರ ಸಾವಿರಕ್ಕೂ ಹೆಚ್ಚು ಟಿ20 ರನ್ಗಳಿಸಿದ 10ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.
3 / 6
ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಬಿರುಸಿನ ಆರಂಭ ಪಡೆದಿದ್ದ ರೋಹಿತ್ ಶರ್ಮಾ ಆಟ ಹೆಚ್ಚುಹೊತ್ತು ನಡೆಯಲಿಲ್ಲ. ಮೊಯೀನ್ ಅಲಿ ಬೌಲಿಂಗ್ ನಲ್ಲಿ 24 ರನ್ ಗಳಿಸಿದ್ದಾಗ ಬಟ್ಲರ್ ಗೆ ಕ್ಯಾಚಿತ್ತು ನಿರ್ಗಮಿಸಿದರು.
4 / 6
ನಂತರ ಸ್ಫೋಟಕ ಆಟವಾಡಿದ ಹಾರ್ದಿಕ್ ಪಾಂಡ್ಯ 33 ಎಸೆತಗಳಲ್ಲಿ 6 ಫೋರ್ ಹಾಗೂ 1 ಸಿಕ್ಸರ್ ಸಿಡಿಸಿ 51 ರನ್ ಚಚ್ಚಿ ನಿರ್ಗಮಿಸಿದರು. ಅಂತಿಮವಾಗಿ ಭಾರತ 20 ಓವರ್ಗೆ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ ಹಾಗೂ ಮೊಯೀನ್ ಅಲಿ ತಲಾ 2 ವಿಕೆಟ್ ಪಡೆದರು.
5 / 6
ದೊಡ್ಡ ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ ಆರಂಭದಿಂದಲೇ ವೈಫಲ್ಯ ಅನುಭವಿಸಿತು. ಇಂಗ್ಲೆಂಡ್ 19.3 ಓವರ್ ನಲ್ಲಿ 148 ರನ್ಗೆ ಆಲೌಟ್ ಆಯಿತು. ಭಾರತ ಪರ ಹಾರ್ದಿಕ್ 4 ವಿಕೆಟ್ ಕಿತ್ತರೆ, ಅರ್ಶ್ ದೀಪ್ ಹಾಗೂ ಚಹಾಲ್ ತಲಾ 2 ವಿಕೆಟ್ ಪಡೆದರು.