ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಚುಟುಕು ಕ್ರಿಕೆಟ್ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಲಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಅಫ್ಘಾನಿಸ್ತಾನದ ಮಾಜಿ ನಾಯಕ ಅಸ್ಗರ್ ಅಫ್ಘಾನ್ ಹಾಗೂ ಇಂಗ್ಲೆಂಡ್ ತಂಡದ ಮಾಜಿ ಕ್ಯಾಪ್ಟನ್ ಇಯಾನ್ ಮೋರ್ಗನ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಇದೀಗ ಹಿಟ್ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 41 ಟಿ20 ಪಂದ್ಯಗಳನ್ನು ಗೆದ್ದಿದ್ದು, ಇನ್ನೊಂದು ಪಂದ್ಯದಲ್ಲಿ ಜಯ ಸಾಧಿಸಿದರೆ ರೋಹಿತ್ ಶರ್ಮಾ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಳ್ಳಲಿದ್ದಾರೆ.