Rohit Sharma: ನಾಯಕತ್ವದಲ್ಲೂ ದಾಖಲೆ ಬರೆದ ರೋಹಿತ್ ಶರ್ಮಾ
TV9 Web | Updated By: ಝಾಹಿರ್ ಯೂಸುಫ್
Updated on:
Jan 16, 2024 | 9:37 AM
Rohit Sharma Record: ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಚುಟುಕು ಕ್ರಿಕೆಟ್ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಲಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಅಫ್ಘಾನಿಸ್ತಾನದ ಮಾಜಿ ನಾಯಕ ಅಸ್ಗರ್ ಅಫ್ಘಾನ್ ಹಾಗೂ ಇಂಗ್ಲೆಂಡ್ ತಂಡದ ಮಾಜಿ ಕ್ಯಾಪ್ಟನ್ ಇಯಾನ್ ಮೋರ್ಗನ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ.
1 / 6
ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವುಗಳೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅದು ಕೂಡ ಅತ್ಯಧಿಕ ಗೆಲುವಿನ ಶೇಕಡಾವಾರು ಪಡೆಯುವ ಮೂಲಕ ಎಂಬುದು ವಿಶೇಷ.
2 / 6
ಅಂದರೆ ಕನಿಷ್ಠ 100 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿ ಅತ್ಯಧಿಕ ಗೆಲುವಿನ ಶೇಕಡಾವಾರು ಹೊಂದಿರುವ ಕ್ಯಾಪ್ಟನ್ಗಳ ಪಟ್ಟಿಯಲ್ಲಿ ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಅಗ್ರಸ್ಥಾನದಲ್ಲಿದ್ದರು.
3 / 6
324 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದ ರಿಕಿ ಪಾಂಟಿಂಗ್ 220 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದರು. ಈ ಮೂಲಕ 67.9 ರಷ್ಟು ಗೆಲುವಿನ ಶೇಕಡಾವಾರು ಪಡೆದು ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದರು.
4 / 6
ಇದೀಗ 109 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ 81 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದಿದ್ದಾರೆ. ಈ ಮೂಲಕ 74.31 ಗೆಲುವಿನ ಶೇಕಡಾವಾರು ಹೊಂದಿರುವ ಹಿಟ್ಮ್ಯಾನ್, ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.
5 / 6
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಅಫ್ಘಾನಿಸ್ತಾನ್ ತಂಡದ ಮಾಜಿ ನಾಯಕ ಅಸ್ಗರ್ ಅಘ್ಘಾನ್. 115 ಪಂದ್ಯಗಳಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಮುನ್ನಡೆಸಿದ್ದ ಅಸ್ಗರ್ 67.82 ಗೆಲುವಿನ ಶೇಕಡಾವಾರು ಹೊಂದಿದ್ದಾರೆ. ಈ ಮೂಲಕ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.
6 / 6
ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಚುಟುಕು ಕ್ರಿಕೆಟ್ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಲಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಅಫ್ಘಾನಿಸ್ತಾನದ ಮಾಜಿ ನಾಯಕ ಅಸ್ಗರ್ ಅಫ್ಘಾನ್ ಹಾಗೂ ಇಂಗ್ಲೆಂಡ್ ತಂಡದ ಮಾಜಿ ಕ್ಯಾಪ್ಟನ್ ಇಯಾನ್ ಮೋರ್ಗನ್ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಇದೀಗ ಹಿಟ್ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 41 ಟಿ20 ಪಂದ್ಯಗಳನ್ನು ಗೆದ್ದಿದ್ದು, ಇನ್ನೊಂದು ಪಂದ್ಯದಲ್ಲಿ ಜಯ ಸಾಧಿಸಿದರೆ ರೋಹಿತ್ ಶರ್ಮಾ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಳ್ಳಲಿದ್ದಾರೆ.