AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಈ ಒಂದು ದಾಖಲೆ ಬರೆಯಲು ರೋಹಿತ್ ಶರ್ಮಾ ಮುಂದಿನ ವರ್ಷದವರೆಗೆ ಕಾಯಲೇಬೇಕು..!

Rohit Sharma Records: ಏಕದಿನ ಕ್ರಿಕೆಟ್​ನಲ್ಲಿ ಸಿಕ್ಸರ್ ಕಿಂಗ್ ಎನಿಸಿಕೊಳ್ಳಲು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೇವಲ 22 ಸಿಕ್ಸ್​ಗಳ ಅವಶ್ಯಕತೆಯಿದೆ. ಈಗಾಗಲೇ 331 ಸಿಕ್ಸ್ ಬಾರಿಸಿರುವ ಹಿಟ್​ಮ್ಯಾನ್ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮೂಲಕ ಹೊಸ ವಿಶ್ವ ದಾಖಲೆ ಬರೆಯುವುದನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
|

Updated on: Aug 11, 2024 | 10:53 AM

Share
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಇದೀಗ ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದಾರೆ. ಆದರೆ ಈ ವಿಶ್ವ ದಾಖಲೆ ನಿರ್ಮಿಸಲು ಹಿಟ್​ಮ್ಯಾನ್ ಮುಂದಿನ ವರ್ಷದವರೆಗೆ ಕಾಯಲೇಬೇಕು ಎಂಬುದೇ ವಿಶೇಷ.

1 / 6
ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಹಿಟ್​ಮ್ಯಾನ್ ಇದೀಗ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಸಹ ಸಿಕ್ಸರ್ ಸರದಾರ ಕ್ರಿಸ್ ಗೇಲ್ ಅವರ ಸಿಕ್ಸರ್​ ದಾಖಲೆಯನ್ನು ಸರಿಗಟ್ಟುವ ಮೂಲಕ. ಇದೀಗ ಗೇಲ್ ಅವರನ್ನು ಹಿಂದಿಕ್ಕಲು ರೋಹಿತ್ ಶರ್ಮಾಗೆ ಒಂದು ಸಿಕ್ಸ್​ನ ಅವಶ್ಯಕತೆಯಿದೆ.

2 / 6
ಈ ಒಂದು ಸಿಕ್ಸ್​ ಸಿಡಿಸಲು ರೋಹಿತ್ ಶರ್ಮಾ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯವರೆಗೆ ಕಾಯಲೇಬೇಕು. ಏಕೆಂದರೆ ಈ ವರ್ಷ ಭಾರತ ತಂಡಕ್ಕೆ ಯಾವುದೇ ಏಕದಿನ ಸರಣಿಯಿಲ್ಲ. ಹೀಗಾಗಿ 2025 ರಲ್ಲಿ ನಡೆಯುವ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕವಷ್ಟೇ ಹಿಟ್​ಮ್ಯಾನ್ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಮೇಲೇರಬಹುದು.

3 / 6
ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ಸ್ಪೋಟಕ ದಾಂಡಿಗ ಶಾಹಿದ್ ಅಫ್ರಿದಿ ಹೆಸರಿನಲ್ಲಿದೆ. 369 ಏಕದಿನ ಇನಿಂಗ್ಸ್ ಆಡಿರುವ ಅಫ್ರಿದಿ ಒಟ್ಟು 351 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 6
ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಯುನಿವರ್ಸ್ ಬಾಸ್ ಖ್ಯಾತಿಯ ಗೇಲ್ 294 ಏಕದಿನ ಇನಿಂಗ್ಸ್​ಗಳಿಂದ 331 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಒನ್​ಡೇ ಕ್ರಿಕೆಟ್​ನ 2ನೇ ಸಿಕ್ಸರ್ ಕಿಂಗ್ಸ್ ಎನಿಸಿಕೊಂಡಿದ್ದಾರೆ.

5 / 6
ಇದೀಗ ಕ್ರಿಸ್ ಗೇಲ್ ದಾಖಲೆಯನ್ನು ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ. 257 ಏಕದಿನ ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ ಒಟ್ಟು 331 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಇನ್ನೊಂದು ಸಿಕ್ಸ್ ಬಾರಿಸಿದರೆ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದು ಸಿಕ್ಸರ್ ಸರದಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನಕ್ಕೇರಲಿದ್ದಾರೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!