IPL 2023: ಎಬಿ ಡಿವಿಲಿಯರ್ಸ್​ ದಾಖಲೆ ಮುರಿದ ರೋಹಿತ್ ಶರ್ಮಾ

IPL 2023 Kannada: ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಸಾರ್ವಕಾಲಿಕ ದಾಖಲೆ ಕೆಕೆಆರ್, ಆರ್​ಸಿಬಿ, ಪಂಜಾಬ್ ಕಿಂಗ್ಸ್ ಪರ ಆಡಿರುವ ಕ್ರಿಸ್ ಗೇಲ್ ಹೆಸರಿನಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:May 12, 2023 | 11:59 PM

IPL 2023: ಐಪಿಎಲ್​ನ 57ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 18 ಎಸೆತಗಳಲ್ಲಿ 3 ಫೋರ್ ಹಾಗೂ 2 ಭರ್ಜರಿ ಸಿಕ್ಸ್​ನೊಂದಿಗೆ 29 ರನ್ ಬಾರಿಸಿದ್ದರು. ವಿಶೇಷ ಎಂದರೆ ಈ 2 ಸಿಕ್ಸ್​ನೊಂದಿಗೆ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 2ನೇ ಸ್ಥಾನಕ್ಕೇರಿದ್ದಾರೆ.

2 / 6
ಇದಕ್ಕೂ ಮುನ್ನ ದ್ವಿತೀಯ ಸ್ಥಾನದಲ್ಲಿ ಎಬಿ ಡಿವಿಲಿಯರ್ಸ್ ಇದ್ದರು. ಎಬಿಡಿ 170 ಇನಿಂಗ್ಸ್​ಗಳಲ್ಲಿ ಒಟ್ಟು 251 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ 234 ಇನಿಂಗ್ಸ್​ಗಳಲ್ಲಿ 253 ಸಿಕ್ಸ್ ಸಿಡಿಸುವ ಮೂಲಕ ರೋಹಿತ್ ಶರ್ಮಾ ಎಬಿಡಿಯನ್ನು ಹಿಂದಿಕ್ಕಿ ಐಪಿಎಲ್​ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

4 / 6
ಅಲ್ಲದೆ ಐಪಿಎಲ್​ ಇತಿಹಾಸದಲ್ಲೇ 250 ಕ್ಕಿಂತ ಅಧಿಕ ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ರೋಹಿತ್ ಶರ್ಮಾ ನಿರ್ಮಿಸಿದ್ದಾರೆ.

5 / 6
ಅಂದಹಾಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಸಾರ್ವಕಾಲಿಕ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಕೆಕೆಆರ್, ಆರ್​ಸಿಬಿ, ಪಂಜಾಬ್ ಕಿಂಗ್ಸ್ ಪರ ಒಟ್ಟು 141 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ ಒಟ್ಟು 357 ಸಿಕ್ಸ್​ಗಳನ್ನು ಸಿಡಿಸಿ ಭರ್ಜರಿ ದಾಖಲೆ ನಿರ್ಮಿಸಿಟ್ಟಿದ್ದಾರೆ.

6 / 6

Published On - 11:51 pm, Fri, 12 May 23

Follow us