Updated on: May 12, 2023 | 11:59 PM
IPL 2023: ಐಪಿಎಲ್ನ 57ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.
ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 18 ಎಸೆತಗಳಲ್ಲಿ 3 ಫೋರ್ ಹಾಗೂ 2 ಭರ್ಜರಿ ಸಿಕ್ಸ್ನೊಂದಿಗೆ 29 ರನ್ ಬಾರಿಸಿದ್ದರು. ವಿಶೇಷ ಎಂದರೆ ಈ 2 ಸಿಕ್ಸ್ನೊಂದಿಗೆ ಐಪಿಎಲ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 2ನೇ ಸ್ಥಾನಕ್ಕೇರಿದ್ದಾರೆ.
ಇದಕ್ಕೂ ಮುನ್ನ ದ್ವಿತೀಯ ಸ್ಥಾನದಲ್ಲಿ ಎಬಿ ಡಿವಿಲಿಯರ್ಸ್ ಇದ್ದರು. ಎಬಿಡಿ 170 ಇನಿಂಗ್ಸ್ಗಳಲ್ಲಿ ಒಟ್ಟು 251 ಸಿಕ್ಸ್ ಬಾರಿಸಿ ದಾಖಲೆ ನಿರ್ಮಿಸಿದ್ದರು.
ಇದೀಗ 234 ಇನಿಂಗ್ಸ್ಗಳಲ್ಲಿ 253 ಸಿಕ್ಸ್ ಸಿಡಿಸುವ ಮೂಲಕ ರೋಹಿತ್ ಶರ್ಮಾ ಎಬಿಡಿಯನ್ನು ಹಿಂದಿಕ್ಕಿ ಐಪಿಎಲ್ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.
ಅಲ್ಲದೆ ಐಪಿಎಲ್ ಇತಿಹಾಸದಲ್ಲೇ 250 ಕ್ಕಿಂತ ಅಧಿಕ ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ರೋಹಿತ್ ಶರ್ಮಾ ನಿರ್ಮಿಸಿದ್ದಾರೆ.
ಅಂದಹಾಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಸಾರ್ವಕಾಲಿಕ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಕೆಕೆಆರ್, ಆರ್ಸಿಬಿ, ಪಂಜಾಬ್ ಕಿಂಗ್ಸ್ ಪರ ಒಟ್ಟು 141 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ ಒಟ್ಟು 357 ಸಿಕ್ಸ್ಗಳನ್ನು ಸಿಡಿಸಿ ಭರ್ಜರಿ ದಾಖಲೆ ನಿರ್ಮಿಸಿಟ್ಟಿದ್ದಾರೆ.
Published On - 11:51 pm, Fri, 12 May 23