Rohit Sharma: ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದ ರೋಹಿತ್ ಶರ್ಮಾ
TV9 Web | Updated By: ಝಾಹಿರ್ ಯೂಸುಫ್
Updated on:
Jan 13, 2024 | 7:17 AM
Rohit Sharma Records: ಈ ಪಟ್ಟಿಯಲ್ಲಿ 42 ಗೆಲುವು ದಾಖಲಿಸಿರುವ ಇಂಗ್ಲೆಂಡ್ನ ಮಾಜಿ ನಾಯಕ ಇಯಾನ್ ಮೋರ್ಗನ್ ಹಾಗೂ ಅಫ್ಘಾನಿಸ್ತಾನ್ ತಂಡದ ಮಾಜಿ ನಾಯಕ ಅಸ್ಗರ್ ಅಫ್ಘಾನ್ ಜಂಟಿಯಾಗಿ ಅಗ್ರಸ್ಥಾನಗಳಲ್ಲಿದ್ದಾರೆ. ಇದೀಗ ಈ ದಾಖಲೆ ಸರಿಗಟ್ಟಲು ರೋಹಿತ್ ಶರ್ಮಾಗೆ ಇನ್ನು ಕೇವಲ 2 ಗೆಲುವುಗಳ ಅವಶ್ಯಕತೆಯಿದೆ.
1 / 7
ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ವಿಶ್ವದ ಯಾವುದೇ ಆಟಗಾರ ಬರೆಯದ ದಾಖಲೆ ಎಂಬುದು ವಿಶೇಷ.
2 / 7
ಹೌದು, ಅಫ್ಘಾನಿಸ್ತಾನ್ ವಿರುದ್ಧದ ಜಯದೊಂದಿಗೆ ರೋಹಿತ್ ಶರ್ಮಾ ಭಾರತದ ಪರ 100 ಟಿ20 ಪಂದ್ಯಗಳ ಗೆಲುವು ದಾಖಲಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ನೂರು ಟಿ20 ಪಂದ್ಯಗಳ ಗೆಲುವಿನ ಭಾಗವಾಗಿರುವ ವಿಶ್ವದ ಮೊದಲ ಆಟಗಾರ ಎಂಬ ವಿಶ್ವ ದಾಖಲೆಯನ್ನು ಹಿಟ್ಮ್ಯಾನ್ ಬರೆದಿದ್ದಾರೆ.
3 / 7
ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಶೊಯೇಬ್ ಮಲಿಕ್. ಪಾಕ್ ಪರ 124 ಪಂದ್ಯಗಳನ್ನಾಡಿರುವ ಮಲಿಕ್ 86 ಮ್ಯಾಚ್ಗಳಲ್ಲಿ ಗೆಲುವಿನ ಭಾಗವಾಗಿದ್ದಾರೆ.
4 / 7
ಇದೀಗ ಟೀಮ್ ಇಂಡಿಯಾ ಪರ ಒಟ್ಟು 149 ಟಿ20 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 100 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸವನ್ನು ರಚಿಸಿದ್ದಾರೆ.
5 / 7
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ನಾಯಕನಾಗಿ ಇದು ರೋಹಿತ್ ಶರ್ಮಾ ಅವರ 40ನೇ ಗೆಲುವು. ಈ ಮೂಲಕ ಟಿ20 ಕ್ರಿಕೆಟ್ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ಹಿಟ್ಮ್ಯಾನ್ 5ನೇ ಸ್ಥಾನಕ್ಕೇರಿದ್ದಾರೆ.
6 / 7
ಒಂದು ವೇಳೆ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದರೆ, ಟಿ20 ಕ್ರಿಕೆಟ್ನ ಅತ್ಯಂತ ಯಶಸ್ವಿ ನಾಯಕನ ದಾಖಲೆಯನ್ನು ರೋಹಿತ್ ಶರ್ಮಾ ಸರಿಗಟ್ಟಲಿದ್ದಾರೆ.
7 / 7
ಈ ಪಟ್ಟಿಯಲ್ಲಿ 42 ಗೆಲುವು ದಾಖಲಿಸಿರುವ ಇಂಗ್ಲೆಂಡ್ನ ಮಾಜಿ ನಾಯಕ ಇಯಾನ್ ಮೋರ್ಗನ್ ಹಾಗೂ ಅಫ್ಘಾನಿಸ್ತಾನ್ ತಂಡದ ಮಾಜಿ ನಾಯಕ ಅಸ್ಗರ್ ಅಫ್ಘಾನ್ ಜಂಟಿಯಾಗಿ ಅಗ್ರಸ್ಥಾನಗಳಲ್ಲಿದ್ದಾರೆ. ಇದೀಗ ಈ ದಾಖಲೆ ಸರಿಗಟ್ಟಲು ರೋಹಿತ್ ಶರ್ಮಾಗೆ ಇನ್ನು ಕೇವಲ 2 ಗೆಲುವುಗಳ ಅವಶ್ಯಕತೆಯಿದೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ನಾಯಕನಾಗಿಯೂ ರೋಹಿತ್ ಶರ್ಮಾ ಹೊಸ ದಾಖಲೆ ಬರೆಯಬಹುದು.
Published On - 6:53 am, Sat, 13 January 24