- TV9 Kannada Kannada News Photos Cricket Photos Rohit Sharma Set To Break Virender Sehwag's Test Record
Rohit Sharma: ಸಿಕ್ಸರ್ ದಾಖಲೆಯ ಸನಿಹದಲ್ಲಿ ಹಿಟ್ಮ್ಯಾನ್
ಟೆಸ್ಟ್ ಕ್ರಿಕೆಟ್ನಲ್ಲಿ ಕೇವಲ ಮೂವರು ಬ್ಯಾಟರ್ಗಳು ಮಾತ್ರ 100 ಸಿಕ್ಸ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಬೆನ್ ಸ್ಟೋಕ್ಸ್ ಅಗ್ರಸ್ಥಾನದಲ್ಲಿದ್ದರೆ, ಬ್ರೆಂಡನ್ ಮೆಕಲಂ (107 ಸಿಕ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಆ್ಯಡಂ ಗಿಲ್ಕ್ರಿಸ್ಟ್ (100) ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿಕ್ಸರ್ ಸರದಾರರ ಪಟ್ಟಿಗೆ ಸೇರ್ಪಡೆಯಾಗಲು ರೋಹಿತ್ ಶರ್ಮಾಗೆ ಉತ್ತಮ ಅವಕಾಶವಿದೆ.
Updated on: Sep 15, 2024 | 9:19 AM

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 8 ಸಿಕ್ಸ್ ಸಿಡಿಸಿದರೆ ಹೊಸ ದಾಖಲೆ ನಿರ್ಮಾಣವಾಗಲಿದೆ. ಅದು ಸಹ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಸಿಕ್ಸರ್ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. 180 ಇನಿಂಗ್ಸ್ಗಳಲ್ಲಿ ಸೆಹ್ವಾಗ್ ಒಟ್ಟು 91 ಸಿಕ್ಸ್ಗಳನ್ನು ಸಿಡಿಸಿ ಭಾರತದ ಪರ ಟೆಸ್ಟ್ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಈ ಭರ್ಜರಿ ದಾಖಲೆಯನ್ನು ಮುರಿಯಲು ರೋಹಿತ್ ಶರ್ಮಾಗೆ ಬೇಕಿರುವುದು ಕೇವಲ 8 ಸಿಕ್ಸರ್ಗಳು ಮಾತ್ರ. ಟೀಮ್ ಇಂಡಿಯಾ ಪರ 101 ಟೆಸ್ಟ್ ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ ಈವರೆಗೆ 84 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ರೋಹಿತ್ ಶರ್ಮಾ ಎಂಟು ಸಿಕ್ಸ್ಗಳನ್ನು ಬಾರಿಸಿದರೆ, ಭಾರತದ ಪರ ಟೆಸ್ಟ್ನಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಹಾಗೆಯೇ ರೋಹಿತ್ ಶರ್ಮಾ ಬ್ಯಾಟ್ನಿಂದ 16 ಸಿಕ್ಸರ್ಗಳು ಮೂಡಿಬಂದರೆ ಟೆಸ್ಟ್ ಕ್ರಿಕೆಟ್ನಲ್ಲಿ 100 ಸಿಕ್ಸರ್ಗಳ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಈ ದಾಖಲೆ ಬರೆದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

ಸದ್ಯ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್. ಇಂಗ್ಲೆಂಡ್ ಪರ 190 ಇನಿಂಗ್ಸ್ ಆಡಿರುವ ಸ್ಟೋಕ್ಸ್ ಒಟ್ಟು 131 ಸಿಕ್ಸ್ಗಳನ್ನು ಸಿಡಿಸಿ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸರ್ಗಳನ್ನು ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



