Rohit Sharma: ಸಿಕ್ಸರ್ ದಾಖಲೆಯ ಸನಿಹದಲ್ಲಿ ಹಿಟ್​ಮ್ಯಾನ್

|

Updated on: Sep 15, 2024 | 9:19 AM

ಟೆಸ್ಟ್ ಕ್ರಿಕೆಟ್​ನಲ್ಲಿ ಕೇವಲ ಮೂವರು ಬ್ಯಾಟರ್​ಗಳು ಮಾತ್ರ 100 ಸಿಕ್ಸ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಬೆನ್ ಸ್ಟೋಕ್ಸ್ ಅಗ್ರಸ್ಥಾನದಲ್ಲಿದ್ದರೆ, ಬ್ರೆಂಡನ್ ಮೆಕಲಂ (107 ಸಿಕ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಆ್ಯಡಂ ಗಿಲ್​ಕ್ರಿಸ್ಟ್ (100) ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿಕ್ಸರ್ ಸರದಾರರ ಪಟ್ಟಿಗೆ ಸೇರ್ಪಡೆಯಾಗಲು ರೋಹಿತ್ ಶರ್ಮಾಗೆ ಉತ್ತಮ ಅವಕಾಶವಿದೆ.

1 / 5
ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 8 ಸಿಕ್ಸ್ ಸಿಡಿಸಿದರೆ ಹೊಸ ದಾಖಲೆ ನಿರ್ಮಾಣವಾಗಲಿದೆ. ಅದು ಸಹ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಸಿಕ್ಸರ್​ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ಅಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. 180 ಇನಿಂಗ್ಸ್​ಗಳಲ್ಲಿ ಸೆಹ್ವಾಗ್ ಒಟ್ಟು 91 ಸಿಕ್ಸ್​ಗಳನ್ನು ಸಿಡಿಸಿ ಭಾರತದ ಪರ ಟೆಸ್ಟ್​ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇದೀಗ ಈ ಭರ್ಜರಿ ದಾಖಲೆಯನ್ನು ಮುರಿಯಲು ರೋಹಿತ್ ಶರ್ಮಾಗೆ ಬೇಕಿರುವುದು ಕೇವಲ 8 ಸಿಕ್ಸರ್​ಗಳು ಮಾತ್ರ. ಟೀಮ್ ಇಂಡಿಯಾ ಪರ 101 ಟೆಸ್ಟ್ ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ ಈವರೆಗೆ 84 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ರೋಹಿತ್ ಶರ್ಮಾ ಎಂಟು ಸಿಕ್ಸ್​ಗಳನ್ನು ಬಾರಿಸಿದರೆ, ಭಾರತದ ಪರ ಟೆಸ್ಟ್​ನಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ಬ್ಯಾಟರ್​ ಎನಿಸಿಕೊಳ್ಳಲಿದ್ದಾರೆ.

4 / 5
ಹಾಗೆಯೇ ರೋಹಿತ್ ಶರ್ಮಾ ಬ್ಯಾಟ್​ನಿಂದ 16 ಸಿಕ್ಸರ್​ಗಳು ಮೂಡಿಬಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ 100 ಸಿಕ್ಸರ್​ಗಳ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಈ ದಾಖಲೆ ಬರೆದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

5 / 5
ಸದ್ಯ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್. ಇಂಗ್ಲೆಂಡ್ ಪರ 190 ಇನಿಂಗ್ಸ್ ಆಡಿರುವ ಸ್ಟೋಕ್ಸ್ ಒಟ್ಟು 131 ಸಿಕ್ಸ್​ಗಳನ್ನು ಸಿಡಿಸಿ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸರ್​ಗಳನ್ನು ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.