AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸೌರವ್ ಗಂಗೂಲಿ ದಾಖಲೆ ಮುರಿದ ರೋಹಿತ್ ಶರ್ಮಾ

India vs England: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ವಿವರ ಈ ಕೆಳಗಿನಂತಿದೆ...

TV9 Web
| Edited By: |

Updated on: Feb 15, 2024 | 1:53 PM

Share
ರಾಜ್​ಕೋಟ್​ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು.

1 / 8
ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (10) ಬೇಗನೆ ಔಟಾದರೆ, ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ (0) ವಿಕೆಟ್ ಒಪ್ಪಿಸಿದರು. ಇನ್ನು ರಜತ್ ಪಾಟಿದಾರ್ (5) ಬಂದ ವೇಗದಲ್ಲೇ ಹಿಂತಿರುಗಿದರು.

2 / 8
ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ಕ್ರೀಸ್ ಕಚ್ಚಿ ನಿಂತ ರೋಹಿತ್ ಶರ್ಮಾ ನಾಯಕನ ಆಟವಾಡಿದರು. ಆರಂಭಿಕ ಆಘಾತದಿಂದ ತಂಡವನ್ನು ಪಾರು ಮಾಡುವ ಜವಾಬ್ದಾರಿವಹಿಸಿಕೊಂಡ ರೋಹಿತ್ ಶರ್ಮಾ ರವೀಂದ್ರ ಜಡೇಜಾ ಜೊತೆಗೂಡಿ ಇನಿಂಗ್ಸ್ ಕಟ್ಟಿದರು.

3 / 8
ಅಷ್ಟೇ ಅಲ್ಲದೆ ಅರ್ಧಶತಕ ಪೂರೈಸಿದರು. ಈ ಅರ್ಧಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಹೆಚ್ಚು ರನ್​ ಕಲೆಹಾಕಿದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾದರು. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಗಂಗೂಲಿ 4ನೇ ಸ್ಥಾನದಲ್ಲಿದ್ದರು.

4 / 8
ಟೀಮ್ ಇಂಡಿಯಾ ಪರ 485 ಇನಿಂಗ್ಸ್ ಆಡಿರುವ ಸೌರವ್ ಗಂಗೂಲಿ ಒಟ್ಟು 18433 ರನ್​ ಕಲೆಹಾಕಿದ್ದಾರೆ. ಈ ವೇಳೆ 38 ಶತಕ ಹಾಗೂ 106 ಅರ್ಧಶತಕಗಳನ್ನು ಸಿಡಿಸಿದ್ದಾರೆ.

5 / 8
ಇದೀಗ 494ನೇ ಇನಿಂಗ್ಸ್​ ಮೂಲಕ ರೋಹಿತ್ ಶರ್ಮಾ 18587+ ರನ್​ ಕಲೆಹಾಕಿದ್ದು, ಈ ಮೂಲಕ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 8
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಭಾರತದ ಪರ 782 ಇನಿಂಗ್ಸ್ ಆಡಿರುವ ಸಚಿನ್ 100 ಶತಕ ಮತ್ತು 164 ಅರ್ಧಶತಕಗಳೊಂದಿಗೆ ಒಟ್ಟು 34357 ರನ್ ಪೇರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

7 / 8
ಇನ್ನು ಈ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಟೀಮ್ ಇಂಡಿಯಾ 44 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿದೆ. ಸದ್ಯ ರೋಹಿತ್ ಶರ್ಮಾ (80) ಹಾಗೂ ರವೀಂದ್ರ ಜಡೇಜಾ (50) ಕ್ರೀಸ್​ನಲ್ಲಿದ್ದಾರೆ.

8 / 8
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್