- Kannada News Photo gallery Cricket photos Rohit Sharma Sweats It Out Ahead of India’s Tour of Bangladesh 2022
Rohit Sharma: ಫಿಟ್ನೆಸ್ಗಾಗಿ ಕಸರತ್ತು ಆರಂಭಿಸಿದ ರೋಹಿತ್ ಶರ್ಮಾ
Rohit Sharma: ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.
Updated on: Nov 24, 2022 | 11:09 PM

ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನುಭವಿಸಿದ ಬಳಿಕ ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದರು. ಅದರಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನದ ಕಾರಣಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ನಾಯಕ ರೋಹಿತ್ ಶರ್ಮಾ ಕೂಡ ಮತ್ತೆ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಆದರೆ ಅದಕ್ಕೂ ಮುನ್ನ ವಿಶ್ರಾಂತಿ ಸಮಯದಲ್ಲಿ ಹಿಟ್ಮ್ಯಾನ್ ಜಿಮ್ನತ್ತ ಮುಖ ಮಾಡಿದ್ದಾರೆ. ಒಂದೆಡೆ ಕಳಪೆ ಬ್ಯಾಟಿಂಗ್ ಮತ್ತೊಂದಡೆ ಫಿಟ್ನೆಸ್ ಕುರಿತು ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡಲು ಇದೀಗ ರೋಹಿತ್ ಶರ್ಮಾ ಜಿಮ್ನಲ್ಲಿ ಬೆವರಿಳಿಸುತ್ತಿದ್ದಾರೆ.

ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ. ಮತ್ತೊಂದಡೆ ಟೀಮ್ ಇಂಡಿಯಾದ ನಾಯಕತ್ವದ ಬದಲಾವಣೆಯ ಚರ್ಚೆಗಳು ಶುರುವಾಗಿದೆ.

ಟೀಮ್ ಇಂಡಿಯಾ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡುವುದು ಸೂಕ್ತ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಂದು ವೇಳೆ ಪಾಂಡ್ಯ ಟಿ20 ತಂಡದ ನಾಯಕರಾದರೆ ಕಳಪೆ ಫಾರ್ಮ್ನಲ್ಲಿರುವ ರೋಹಿತ್ ಶರ್ಮಾ ಟೀಮ್ನಿಂದ ಹೊರಬೀಳಬಹುದು.

ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ಸಂಪೂರ್ಣ ಫಿಟ್ನೆಸ್ನತ್ತ ಗಮನಹರಿಸಲು ಹಿಟ್ಮ್ಯಾನ್ ಮುಂದಾಗಿದ್ದಾರೆ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ.




