Updated on:Apr 12, 2023 | 5:30 PM
IPL 2023: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 16ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಅತ್ಯಾಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಹಿಟ್ಮ್ಯಾನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 173 ರನ್ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ಗೆ ರೋಹಿತ್ ಶರ್ಮಾ 45 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ನೊಂದಿಗೆ 65 ರನ್ ಬಾರಿಸಿದ್ದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು 6 ವಿಕೆಟ್ಗಳ ಜಯ ಸಾಧಿಸಿತ್ತು.
ಇನ್ನು ಈ ಮ್ಯಾಚ್ನ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ರೋಹಿತ್ ಶರ್ಮಾ ಅವರಿಗೆ ಒಲಿಯಿತು. ಇದರೊಂದಿಗೆ ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರರಲ್ಲಿ ರೋಹಿತ್ ಶರ್ಮಾ 3ನೇ ಸ್ಥಾನಕ್ಕೇರಿದರು. ಅಷ್ಟೇ ಅಲ್ಲದೆ ಅತ್ಯಧಿಕ ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎನಿಸಿಕೊಂಡರು.
ಹಾಗಿದ್ರೆ ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಆಟಗಾರರು ಯಾರೆಂದು ನೋಡೋಣ...
1- ರೋಹಿತ್ ಶರ್ಮಾ: ಐಪಿಎಲ್ನಲ್ಲಿ 225 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಒಟ್ಟು 19 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.
2- ಮಹೇಂದ್ರ ಸಿಂಗ್ ಧೋನಿ: 208 ಐಪಿಎಲ್ ಇನಿಂಗ್ಸ್ ಆಡಿರುವ ಧೋನಿ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
3- ಯೂಸುಫ್ ಪಠಾಣ್: 154 ಐಪಿಎಲ್ ಇನಿಂಗ್ಸ್ನಲ್ಲಿ ಕಣಕ್ಕಿಳಿದಿರುವ ಯೂಸುಫ್ ಪಠಾಣ್ ಒಟ್ಟು 16 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.
4- ವಿರಾಟ್ ಕೊಹ್ಲಿ: ಆರ್ಸಿಬಿ ಪರ 218 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಒಟ್ಟು 14 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
5- ಸುರೇಶ್ ರೈನಾ: 200 ಐಪಿಎಲ್ ಇನಿಂಗ್ಸ್ ಆಡಿರುವ ಸುರೇಶ್ ರೈನಾ ಒಟ್ಟು 14 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದ್ದರು.
1- ಎಬಿ ಡಿವಿಲಿಯರ್ಸ್: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ದಾಖಲೆ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ. ಒಟ್ಟು 170 ಇನಿಂಗ್ಸ್ ಆಡಿರುವ ಎಬಿಡಿ 25 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
2- ಕ್ರಿಸ್ ಗೇಲ್: ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ 2ನೇ ಸ್ಥಾನದಲ್ಲಿದ್ದಾರೆ. 141 ಇನಿಂಗ್ಸ್ಗಳಲ್ಲಿ ಗೇಲ್ 22 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
3- ರೋಹಿತ್ ಶರ್ಮಾ: ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವುದರೊಂದಿಗೆ ಡೇವಿಡ್ ವಾರ್ನರ್ (18) ಅವರನ್ನು ಹಿಂದಿಕ್ಕಿ ರೋಹಿತ್ ಶರ್ಮಾ (19) ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.
Published On - 5:30 pm, Wed, 12 April 23