IPL 2023: ಎಲ್ಲರನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Apr 12, 2023 | 5:30 PM

IPL 2023 Kannada: ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 12
IPL 2023: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 16ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಅತ್ಯಾಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.

2 / 12
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 173 ರನ್​ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್​ಗೆ ರೋಹಿತ್ ಶರ್ಮಾ 45 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 65 ರನ್ ಬಾರಿಸಿದ್ದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು 6 ವಿಕೆಟ್​ಗಳ ಜಯ ಸಾಧಿಸಿತ್ತು.

3 / 12
ಇನ್ನು ಈ ಮ್ಯಾಚ್​ನ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ರೋಹಿತ್ ಶರ್ಮಾ ಅವರಿಗೆ ಒಲಿಯಿತು. ಇದರೊಂದಿಗೆ ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರರಲ್ಲಿ ರೋಹಿತ್ ಶರ್ಮಾ 3ನೇ ಸ್ಥಾನಕ್ಕೇರಿದರು. ಅಷ್ಟೇ ಅಲ್ಲದೆ ಅತ್ಯಧಿಕ ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎನಿಸಿಕೊಂಡರು.

4 / 12
ಹಾಗಿದ್ರೆ ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಭಾರತೀಯ ಆಟಗಾರರು ಯಾರೆಂದು ನೋಡೋಣ...

5 / 12
1- ರೋಹಿತ್ ಶರ್ಮಾ: ಐಪಿಎಲ್​ನಲ್ಲಿ 225 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಒಟ್ಟು 19 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

6 / 12
2- ಮಹೇಂದ್ರ ಸಿಂಗ್ ಧೋನಿ: 208 ಐಪಿಎಲ್ ಇನಿಂಗ್ಸ್​ ಆಡಿರುವ ಧೋನಿ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

7 / 12
3- ಯೂಸುಫ್ ಪಠಾಣ್: 154 ಐಪಿಎಲ್ ಇನಿಂಗ್ಸ್​ನಲ್ಲಿ ಕಣಕ್ಕಿಳಿದಿರುವ ಯೂಸುಫ್ ಪಠಾಣ್ ಒಟ್ಟು 16 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.

8 / 12
4- ವಿರಾಟ್ ಕೊಹ್ಲಿ: ಆರ್​ಸಿಬಿ ಪರ 218 ಇನಿಂಗ್ಸ್​ ಆಡಿರುವ ಕಿಂಗ್ ಕೊಹ್ಲಿ ಒಟ್ಟು 14 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

9 / 12
5- ಸುರೇಶ್ ರೈನಾ: 200 ಐಪಿಎಲ್​ ಇನಿಂಗ್ಸ್ ಆಡಿರುವ ಸುರೇಶ್ ರೈನಾ ಒಟ್ಟು 14 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದ್ದರು.

10 / 12
1- ಎಬಿ ಡಿವಿಲಿಯರ್ಸ್: ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ದಾಖಲೆ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ. ಒಟ್ಟು 170 ಇನಿಂಗ್ಸ್ ಆಡಿರುವ ಎಬಿಡಿ 25 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

11 / 12
2- ಕ್ರಿಸ್ ಗೇಲ್: ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ 2ನೇ ಸ್ಥಾನದಲ್ಲಿದ್ದಾರೆ. 141 ಇನಿಂಗ್ಸ್​ಗಳಲ್ಲಿ ಗೇಲ್ 22 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

12 / 12
3- ರೋಹಿತ್ ಶರ್ಮಾ: ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವುದರೊಂದಿಗೆ ಡೇವಿಡ್ ವಾರ್ನರ್ (18) ಅವರನ್ನು ಹಿಂದಿಕ್ಕಿ ರೋಹಿತ್ ಶರ್ಮಾ (19) ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.

Published On - 5:30 pm, Wed, 12 April 23