Asia Cup 2023: ನೇಪಾಳ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಫೋಟೋ ನೋಡಿ

India vs Nepal, Asia Cup 2023: ನೇಪಾಳ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಆಗಿ ಅಭ್ಯಾಸ ಮಾಡುತ್ತಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

|

Updated on: Sep 04, 2023 | 10:38 AM

ಏಷ್ಯಾಕಪ್ 2023ರ ಟೂರ್ನಿಯಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಐದನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವ ಭಾರತ ರೋಹಿತ್ ಪೌಡೆಲ್ ನೇತೃತ್ವದ ನೇಪಾಳ ತಂಡವನ್ನು ಎದುರಿಸಲಿದೆ. ವಿಶೇಷ ಎಂದರೆ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

1 / 8
ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಇಂಡೋ-ನೇಪಾಳ್ ಮುಖಾಮುಖಿ ಆಗುತ್ತಿರುವುದು ಇದೇ ಮೊದಲ ಬಾರಿ. ಪಾಕ್ ವಿರುದ್ಧದ ಪಂದ್ಯ ರದ್ದಾದ ಪರಿಣಾಮ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇ ಬೇಕಿದೆ. ಅತ್ತ ನೇಪಾಳ ಕೂಡ ಪಾಕ್ ವಿರುದ್ಧ ಸೋತಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸೂಪರ್-4 ಹಂತಕ್ಕೆ ತೇರ್ಗಡೆಯಾದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.

2 / 8
ಇದೀಗ ನೇಪಾಳ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಆಗಿ ಅಭ್ಯಾಸ ಮಾಡುತ್ತಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

3 / 8
ಭಾರತ ತಂಡಕ್ಕೆ ಅಗ್ರಕ್ರಮಾಂಕದ್ದೇ ಚಿಂತೆ. ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ಒದಗಿಸುತ್ತಿಲ್ಲ. ಕೊಹ್ಲಿ ಮತ್ತೆ ಫಾರ್ಮ್ ಕಳೆದುಕೊಂಡಂತೆ ಕಾಣಿಸುತ್ತಿದೆ. ನಾಲ್ಕನೇ ಕ್ರಮಾಂಕಕ್ಕೆ ಬಂದ ಅಯ್ಯರ್ ಮೋಡಿ ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗೆ ಟೀಮ್ ಇಂಡಿಯಾ ಬ್ಯಾಟಿಂಗ್​ನಲ್ಲಿ ಸಾಕಷ್ಟು ತೊಂದರೆಗಳಿವೆ. ಇವುಗಳನ್ನೆಲ್ಲ ಸರಿಪಡಿಸಿ ಇಂದು ಕಣಕ್ಕಿಳಿಯಬೇಕಿದೆ.

4 / 8
ಇದರ ನಡುವೆ ನೇಪಾಳ ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಅವರು ಕಣಕ್ಕಿಳಿಯುವುದಿಲ್ಲ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಾರಣ ಬುಮ್ರಾ ದಿಢೀರ್ ಆಗಿ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಇವರ ಬದಲು ಮೊಹಮ್ಮದ್ ಶಮಿ ಆಡುವುದು ಬಹುತೇಕ ಖಚಿತವಾಗಿದೆ. ಶಾರ್ದೂಲ್ ಥಾಕೂರ್ ಅವರನ್ನು ಕೈಬಿಟ್ಟು ಪ್ರಸಿದ್ಧ್ ಕೃಷ್ಣ ಆಡುವ ಸಂಭವವಿದೆ.

5 / 8
ಪಲ್ಲಕೆಲೆ ನಿಧಾನಗತಿಯ ಪಿಚ್ ಆಗಿರುವುದರಿಂದ ಬ್ಯಾಟ್ಸ್​ಮನ್​ಗಳು ರನ್ ಕದಿಯಲು ಪರದಾಡುವುದು ಖಚಿತ. ಇದು ಕಳೆದ ಪಂದ್ಯದಲ್ಲಿ ಕೂಡ ಕಂಡುಬಂತು. ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವುದು ಉತ್ತಮ. ಈ ಮೈದಾನದಲ್ಲಿ ರನ್ ಚೇಸ್​ನ ದಾಖಲೆಯು ಅತ್ಯುತ್ತಮವಾಗಿದೆ.

6 / 8
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

7 / 8
ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಕುಶಾಲ್ ಭುರ್ಟೆಲ್, ಲಲಿತ್ ರಾಜಬಂಶಿ, ಭೀಮ್ ಸರ್ಕಿ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್, ಆರಿಫ್ ಶೇಖ್, ಪ್ರತಿಸ್ ಜಿಸಿ, ಕಿಶೋರ್ ಮಹತೋ, ಅರ್ಜುನ್, ಸಂದೀಪ್ ಜೋರಾ, ಸೌದ್ ಮತ್ತು ಶ್ಯಾಮ್ ಧಾಕಲ್.

8 / 8
Follow us
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ

ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್

ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ

ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ

ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!

ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು

ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 

ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್

ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ