India vs Bangladesh: ಬಾಂಗ್ಲಾದೇಶಕ್ಕೆ ಹೊರಟ ರೋಹಿತ್, ಕೊಹ್ಲಿ, ರಾಹುಲ್: ಭಾನುವಾರ ಮೊದಲ ಏಕದಿನ ಕದನ
TV9 Web | Updated By: Vinay Bhat
Updated on:
Dec 01, 2022 | 10:14 AM
IND vs BAN 1st ODI: ನ್ಯೂಜಿಲೆಂಡ್ ಪ್ರವಾಸದ ಬಳಿಕ ಟೀಮ್ ಇಂಡಿಯಾ ಇದೀಗ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಇತರೆ ಆಟಗಾರರು ಬಾಂಗ್ಲಾಕ್ಕೆ ಹೊರಟಿದ್ದು ಇಂದು ಢಾಕಾ ತಲುಪಲಿದ್ದಾರೆ.
1 / 9
ಕಿವೀಸ್ ಪ್ರವಾಸದ ಬಳಿಕ ಭಾರತ ಕ್ರಿಕೆಟ್ ತಂಡ ಇದೀಗ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿದೆ. ನ್ಯೂಜಿಲೆಂಡ್ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಇತರೆ ಆಟಗಾರರು ಬಾಂಗ್ಲಾಕ್ಕೆ ಹೊರಟಿದ್ದು ಇಂದು ಢಾಕಾ ತಲುಪಲಿದ್ದಾರೆ.
2 / 9
ಸದ್ಯ ನ್ಯೂಜಿಲೆಂಡ್ನಲ್ಲಿರುವ ಶಿಖರ್ ಧವನ್ ಹಾಗೂ ವಾಷಿಂಗ್ಟನ್ ಸುಂದರ್ ಶುಕ್ರವಾರ ಭಾರತ ತಂಡ ಸೇರಿಕೊಳ್ಳಲಿದ್ದಾರೆ. ಉಳಿದ ಎಲ್ಲ ಆಟಗಾರರು ಇಂದು ಬಾಂಗ್ಲಾದೇಶ ತಲುಪಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಭಾರತ ಹಾಗೂ ಬಾಂಗ್ಲಾ ನಡುವಣಣ ಮೊದಲ ಏಕದಿನ ಪಂದ್ಯ ಇದೇ ಭಾನುವಾರದಂದು ಢಾಕಾದಲ್ಲಿ ಆಯೋಜಿಸಲಾಗಿದೆ.
3 / 9
ಬಾಂಗ್ಲಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಸರಣಿ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಜವಾಬ್ದಾರಿಗೆ ಹಿಂತಿರುಗಿದ್ದಾರೆ. ಇತ್ತ ಬಾಂಗ್ಲಾದೇಶ ತಂಡವನ್ನು ಇಮಿಮ್ ಇಖ್ಬಾಲ್ ಮುನ್ನಡೆಸುತ್ತಿದ್ದಾರೆ.
4 / 9
ಬಾಂಗ್ಲಾದೇಶ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಡಿಸೆಂಬರ್ 4 ರಂದು ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಡಿ. 7 ರಂದು ದ್ವಿತೀಯ ಏಕದಿನ ಮತ್ತು ತೃತೀಯ ಪಂದ್ಯ ಡಿಸೆಂಬರ್ 10ಕ್ಕೆ ಆಯೋಜಿಸಲಾಗಿದೆ.
5 / 9
ಮೂರೂ ಏಕದಿನ ಪಂದ್ಯ ಢಾಕಾದ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಬಳಿಕ ಚಿತ್ತಗಾಂಗ್ನಲ್ಲಿ ಜರುಗಲಿರುವ ಮೊದಲ ಟೆಸ್ಟ್ ಡಿಸೆಂಬರ್ 14-18ರ ವರೆಗೆ ಇರಲಿದೆ. ನಂತರ ಡಿಸೆಂಬರ್ 22-26 ಎರಡನೇ ಟೆಸ್ಟ್ ಇದ್ದು ಢಾಕಾದಲ್ಲಿ ಆಯೋಜಿಸಲಾಗಿದೆ.
6 / 9
ಈಗಾಗಲೇ ಏಕದಿನ ಸರಣಿಗೆ ಈಗಾಗಲೇ ಉಭಯ ತಂಡಗಳು ಪ್ರಕಟವಾಗಿದೆ. ರೋಹಿತ್, ಕೆಎಲ್. ರಾಹುಲ್, ವಿರಾಟ್ ಕೊಹ್ಲಿ ಜೊತೆ ಶಿಖರ್ ಧವನ್ ಕೂಡ ಇದ್ದಾರೆ. ಆಲ್‌ರೌಂಡರ್ ಜಡೇಜ ಇಂಜುರಿಯಿಂದ ಚೇತರಿಸಿಕೊಂಡಿಲ್ಲ. ಈ ಕಾರಣಕ್ಕಾಗಿ ಜಡೇಜಾರನ್ನು ಆಯ್ಕೆಗೆ ಪರಿಗಣಿಸಿಲ್ಲ.
7 / 9
ಭಾರತ ಪರ ರಜತ್ ಪಟಿದಾರ್, ರಾಹುಲ್ ತ್ರಿಪಾಠಿ, ಕುಲ್ದೀಪ್ ಸೇನ್ ಹೊಸ ಮುಖಗಳಾಗಿದೆ. ಇತ್ತ ಬಾಂಗ್ಲಾ ಪರ ಮೊಹಮ್ಮದುಲ್ಲ ರಿಯಾದ್ ಮತ್ತು ಮುಷ್ಫೀಕುರ್ ರಹೀಮ್ ರಾಷ್ಟ್ರೀಯ ತಂಡಕ್ಕೆ ಕಮ್ಬ್ಯಾಕ್ ಮಾಡಲಿದ್ದಾರೆ. ಅನಾಮುಲ್ ಹಖ್ ಬಿಜೋಯ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.
8 / 9
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಶಹ್ಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.
9 / 9
ಬಾಂಗ್ಲಾದೇಶ ತಂಡ: ತಮೀಮ್ ಇಕ್ಬಾಲ್ (ನಾಯಕ), ಲಿಟನ್ ದಾಸ್, ಅನಾಮುಲ್ ಹಕ್ ಬಿಜೋಯ್, ಶಕಿಬ್ ಅಲ್ ಹಸನ್, ಮುಷ್ಫೀಕುರ್ ರಹೀಮ್, ಅಫೀಫ್ ಹುಸೇನ್, ಯಾಸಿರ್ ಅಲಿ, ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಎಬಾಡೋತ್ ಹುಸೇನ್, ನಸ್ಮದ್, ನಸ್ಮದ್, ನಸ್ಮದ್ ಶಾಂತೋ, ನೂರುಲ್ ಹಸನ್ ಸೋಹನ್.