AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಂಬ್ಯಾಕ್​ಗೆ ಡೇಟ್ ಫಿಕ್ಸ್

Virat Kohli and Rohit Sharma: ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ 2027ರ ಏಕದಿನ ವಿಶ್ವಕಪ್​ವರೆಗೆ ಒಡಿಐ ಕ್ರಿಕೆಟ್​ನಲ್ಲಿ ಮುಂದುವರೆಯಲು ಬಯಸಿದ್ದಾರೆ. ಹೀಗಾಗಿ ಇನ್ನೂ ಒಂದಷ್ಟು ಪಂದ್ಯಗಳಲ್ಲಿ ರೋಕೊ ಜೋಡಿಯನ್ನು ಎದುರು ನೋಡಬಹುದು.

ಝಾಹಿರ್ ಯೂಸುಫ್
|

Updated on: Oct 04, 2025 | 9:55 AM

Share
ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಟೀಮ್ ಇಂಡಿಯಾ ಪರ ಕಣಕ್ಕಿಳಿದು ಆರು ತಿಂಗಳುಗಳೇ ಕಳೆದಿವೆ. ಚಾಂಪಿಯನ್ಸ್ ಟ್ರೋಫಿ 2025 ರ ಫೈನಲ್ ಬಳಿಕ ಇಬ್ಬರು ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ. ಇದಕ್ಕೆ ಮುಖ್ಯ ಕಾರಣ ಚಾಂಪಿಯನ್ಸ್ ಟ್ರೋಫಿ ನಂತರ ಭಾರತ ತಂಡವು ಯಾವುದೇ ಏಕದಿನ ಸರಣಿ ಆಡದಿರುವುದು.

1 / 5
ಅಂದರೆ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತರಾಗಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇನ್ನು ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆದ ಕಾರಣ ಈ ಟೂರ್ನಿಯಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ.

2 / 5
ಇನ್ನು ಏಷ್ಯಾಕಪ್ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಹೀಗಾಗಿ ಈ ಸರಣಿಯಲ್ಲೂ ರೋಹಿತ್, ವಿರಾಟ್ ಬ್ಯಾಟಿಂಗ್​ ನೋಡುವ ಅವಕಾಶ ಅಭಿಮಾನಿಗಳಿಗೆ ದೊರೆಯುವುದಿಲ್ಲ. ಇದಾಗ್ಯೂ ಇದೇ ತಿಂಗಳು ಇಬ್ಬರು ದಿಗ್ಗಜರು ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ.

3 / 5
ಅಕ್ಟೋಬರ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿರುವುದು ಖಚಿತವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಇಂದು (ಅ.4) ಭಾರತ ತಂಡದ ಘೋಷಣೆಯಾಗಲಿದ್ದು, ಈ ಸರಣಿಯಲ್ಲಿ ಕೊಹ್ಲಿ ಹಾಗೂ ರೋಹಿತ್ ಕಾಣಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಇದೇ ತಿಂಗಳು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡುವುದು ಕನ್ಫರ್ಮ್ ಆದಂತಾಗಿದೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ