ಟಿ20 ವಿಶ್ವಕಪ್ ಟ್ರೋಫಿಗೆ ವಿಶೇಷ ಪೂಜೆ ಸಲ್ಲಿಸಿದ ರೋಹಿತ್ ಶರ್ಮಾ
T20 World Cup 2024 Final: ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್ಗಳಲ್ಲಿ 169 ರನ್ಗಳಿಸಿ 7 ವಿಕೆಟ್ಗಳಿಂದ ಸೋಲೊಪ್ಪಿಕೊಂಡಿತು.
1 / 6
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಟಿ20 ಟ್ರೋಫಿ ವಿಶೇಷವಾಗಿ ಆರತಿ ಬೆಳಗಲಾಯಿತು.
2 / 6
ಇದೀಗ 17 ವರ್ಷಗಳ ಬಳಿಕ ಭಾರತಕ್ಕೆ ದೊರಕಿದ ಟಿ20 ವಿಶ್ವಕಪ್ ಟ್ರೋಫಿಯ ವಿಶೇಷ ಪೂಜೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಈ ಪೂಜೆಯ ಬಳಿಕ ಟೀಮ್ ಇಂಡಿಯಾ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಜೊತೆಯಾಗಿ ಸಿಯೆಟ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು.
3 / 6
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿಯಿತು. ಈ ಪಂದ್ಯದ ಗೆಲುವಿನ ರೂವಾರಿಗಳೆಂದರೆ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ. 76 ರನ್ಗಳ ಕೊಡುಗೆಯೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾ 176 ರನ್ ಪೇರಿಸಲು ನೆರವಾಗಿದ್ದರು.
4 / 6
177 ರನ್ಗಳ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಒಂದು ಹಂತದಲ್ಲಿ ಗೆಲುವನ್ನು ಖಚಿತಪಡಿಸಿಕೊಂಡಿತ್ತು. ಏಕೆಂದರೆ ಕೊನೆಯ 30 ಎಸೆತಗಳಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಬೇಕಿದದ್ದು ಕೇವಲ 30 ರನ್ಗಳು ಮಾತ್ರ. ಈ ವೇಳೆ ದಾಳಿಗಳಿದ ಜಸ್ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು.
5 / 6
ಕೊನೆಯ 5 ಓವರ್ಗಳಲ್ಲಿ ಬುಮ್ರಾ ಎಸೆದ 2 ಓವರ್ಗಳು ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತು. 16ನೇ ಓವರ್ನಲ್ಲಿ ಜಸ್ಪ್ರೀತ್ ಬುಮ್ರಾ ನೀಡಿದ್ದು ಕೇವಲ 4 ರನ್ಗಳು ಮಾತ್ರ. ಇದರಿಂದ ಒತ್ತಡಕ್ಕೆ ಸಿಲುಕಿದ ಹೆನ್ರಿಕ್ ಕ್ಲಾಸೆನ್ 17ನೇ ಓವರ್ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. ಅಲ್ಲದೆ ಈ ಓವರ್ನಲ್ಲಿ ಪಾಂಡ್ಯ ನೀಡಿದ್ದು ಕೇವಲ 4 ರನ್ಗಳು ಮಾತ್ರ.
6 / 6
ಇದಾದ ಬಳಿಕ 18ನೇ ಓವರ್ನಲ್ಲಿ ಬಿಗಿ ದಾಳಿ ಸಂಘಟಿಸಿದ ಜಸ್ಪ್ರೀತ್ ಬುಮ್ರಾ ಮಾರ್ಕೊ ಯಾನ್ಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಈ ಓವರ್ನಲ್ಲಿ ಬುಮ್ರಾ ನೀಡಿದ್ದು ಕೇವಲ 2 ರನ್ಗಳು ಮಾತ್ರ. ಅಂತಿಮವಾಗಿ 20 ಓವರ್ಗಳಲ್ಲಿ 169 ರನ್ಗಳಿಸಿ ಸೌತ್ ಆಫ್ರಿಕಾ ತಂಡವು 7 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ 2ನೇ ಬಾರಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅನ್ನು 2ನೇ ಬಾರಿಗೆ ಮುಡಿಗೇರಿಕೊಂಡಿದೆ.
Published On - 9:00 am, Thu, 22 August 24