ಹಾಗೆಯೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ತವರಿನಲ್ಲಿ ನಡೆದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಸೋತರೆ, ಒಂದು ಮ್ಯಾಚ್ನಲ್ಲಿ ಡ್ರಾ ಮಾಡಿಕೊಂಡಿದೆ. ಅಂದರೆ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯ ಸೋತಿದ್ದ ಭಾರತ, 4ನೇ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಇದೀಗ ಇಂಗ್ಲೆಂಡ್ ಎದುರು ಹೀನಾಯವಾಗಿ ಸೋಲನುಭವಿಸಿದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ತವರಿನಲ್ಲಿ ನಡೆದ ಕಳೆದ ಮೂರು ಟೆಸ್ಟ್ ಪಂದ್ಯಗಳಲ್ಲೂ ಭಾರತ ತಂಡ ಜಯ ಸಾಧಿಸಿಲ್ಲ ಎಂಬುದು. ಇದು ಹಿಟ್ಮ್ಯಾನ್ ಅವರ ಟೆಸ್ಟ್ ನಾಯಕತ್ವಕ್ಕೆ ಹಿಡಿದ ಕೈಗನ್ನಡಿ ಎಂದರೆ ತಪ್ಪಾಗಲಾರದು.