Virat Kohli vs Rohit Sharma: ವಿರಾಟ್ ಕೊಹ್ಲಿ vs ರೋಹಿತ್ ಶರ್ಮಾ: ಯಾರು ಉತ್ತಮ ನಾಯಕ?

| Updated By: ಝಾಹಿರ್ ಯೂಸುಫ್

Updated on: Jan 29, 2024 | 11:59 AM

Rohit Sharma vs Virat Kohli: ರೋಹಿತ್ ಶರ್ಮಾ ಬದಲಿಗೆ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಇಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ...ಇವರಿಬ್ಬರಲ್ಲಿ ಯಾರು ಉತ್ತಮ ಟೆಸ್ಟ್ ಕ್ಯಾಪ್ಟನ್ ಎಂದು ನೋಡುವುದಾದರೆ....

1 / 10
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ನಾಯಕತ್ವದ ಚರ್ಚೆಗಳು ಮುನ್ನಲೆ ಬಂದಿವೆ. ಈ ಬಾರಿ ಕೂಡ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾ (Rohit Sharma) ನಡುವೆ ಯಾರು ಬೆಸ್ಟ್ ಟೆಸ್ಟ್ ಕ್ಯಾಪ್ಟನ್? ಎಂಬ ಚರ್ಚೆಗಳು ನಡೆಯುತ್ತಿದೆ.

2 / 10
ಇಂತಹದೊಂದು ಚರ್ಚೆ ಶುರುವಾಗಲು ಮುಖ್ಯ ಕಾರಣ ಹೈದರಾಬಾದ್​ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 28 ರನ್​ಗಳಿಂದ ಸೋಲನುಭವಿಸಿರುವುದು. ಗೆಲ್ಲಬಹುದಾಗಿದ್ದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಕಳಪೆ ನಾಯಕತ್ವವೇ ಮುಳುವಾಯಿತು ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

3 / 10
ಇದಕ್ಕೆ ಕಾರಣ, ದ್ವಿತೀಯ ಇನಿಂಗ್ಸ್​ನಲ್ಲಿ 163 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ಆ ಬಳಿಕ 420 ರನ್ ಪೇರಿಸಿರುವುದು. ಅಂದರೆ ಬೌಲರ್​ಗಳ ಜೊತೆಗೂಡಿ ಒಲೀ ಪೋಪ್ 257 ರನ್​ಗಳನ್ನು ಕಲೆಹಾಕಿದ್ದರು. ಇದು ರೋಹಿತ್ ಶರ್ಮಾ ಅವರ ನಾಯಕತ್ವದ ವೈಫಲ್ಯಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.

4 / 10
ಇದರ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್​ನಲ್ಲಿ ಆಕ್ರಮಣಕಾರಿ ನಾಯಕತ್ವದ ಅಗತ್ಯತೆಯಿದೆ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರಲಾರಂಭಿಸಿದೆ. ಈ ಹಿಂದೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿತ್ತು.

5 / 10
ಟೆಸ್ಟ್​ನಲ್ಲಿ ಭಾರತ ತಂಡ ಪಾರುಪತ್ಯ ಮೆರೆಯಲು ಮುಖ್ಯ ಕಾರಣ ವಿರಾಟ್ ಕೊಹ್ಲಿಯಲ್ಲಿನ ಆಕ್ರಮಣಕಾರಿ ನಾಯಕತ್ವದ ಗುಣಗಳು. ಹೀಗಾಗಿಯೇ ರೋಹಿತ್ ಶರ್ಮಾ ಬದಲಿಗೆ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡಬೇಕೆಂಬ ಅಭಿಪ್ರಾಯಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿವೆ. ಇಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ...ಇವರಿಬ್ಬರಲ್ಲಿ ಯಾರು ಉತ್ತಮ ಟೆಸ್ಟ್ ನಾಯಕ ಎಂದು ನೋಡುವುದಾದರೆ....

6 / 10
ರೋಹಿತ್ ಶರ್ಮಾ: ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ 12 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 6 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 4 ಮ್ಯಾಚ್​​ಗಳಲ್ಲಿ ಸೋತಿದೆ. ಇನ್ನು 2 ಪಂದ್ಯಗಳು ಡ್ರಾನಲ್ಲಿ ಅಂತ್ಯ ಕಂಡಿದೆ. ಅಂದರೆ 2022 ರಿಂದ ಭಾರತ ಟೆಸ್ಟ್ ತಂಡದ ನಾಯಕರಾಗಿರುವ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ನಾಲ್ಕು ಪಂದ್ಯಗಳಲ್ಲಿ ಸೋತಿದೆ.

7 / 10
ಹಾಗೆಯೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ತವರಿನಲ್ಲಿ ನಡೆದ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಸೋತರೆ, ಒಂದು ಮ್ಯಾಚ್​ನಲ್ಲಿ ಡ್ರಾ ಮಾಡಿಕೊಂಡಿದೆ. ಅಂದರೆ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯ ಸೋತಿದ್ದ ಭಾರತ, 4ನೇ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಇದೀಗ ಇಂಗ್ಲೆಂಡ್ ಎದುರು ಹೀನಾಯವಾಗಿ ಸೋಲನುಭವಿಸಿದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ತವರಿನಲ್ಲಿ ನಡೆದ ಕಳೆದ ಮೂರು ಟೆಸ್ಟ್ ಪಂದ್ಯಗಳಲ್ಲೂ ಭಾರತ ತಂಡ ಜಯ ಸಾಧಿಸಿಲ್ಲ ಎಂಬುದು. ಇದು ಹಿಟ್​ಮ್ಯಾನ್ ಅವರ ಟೆಸ್ಟ್ ನಾಯಕತ್ವಕ್ಕೆ ಹಿಡಿದ ಕೈಗನ್ನಡಿ ಎಂದರೆ ತಪ್ಪಾಗಲಾರದು.

8 / 10
ವಿರಾಟ್ ಕೊಹ್ಲಿ: 2014 ರಿಂದ 2022 ರವರೆಗೆ ವಿರಾಟ್ ಕೊಹ್ಲಿ ಭಾರತ ತಂಡವನ್ನು 68	 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 40 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 17 ಪಂದ್ಯಗಳಲ್ಲಿ ಸೋತರೆ, 11 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಈ ಮೂಲಕ ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ಟೆಸ್ಟ್ ಕ್ಯಾಪ್ಟನ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.

9 / 10
ವಿಶೇಷ ಎಂದರೆ 8 ವರ್ಷಗಳಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ತವರಿನಲ್ಲಿ ಟೆಸ್ಟ್ ಪಂದ್ಯಗಳನ್ನು ಸೋತಿರುವುದು ಕೇವಲ 2 ಬಾರಿ ಮಾತ್ರ. ಭಾರತದಲ್ಲಿ ನಡೆದ 31 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ 24 ಪಂದ್ಯಗಳಲ್ಲಿ ಗೆಲುವು ತಂದುಕೊಟ್ಟರೆ, 5 ಪಂದ್ಯಗಳಲ್ಲಿ ಡ್ರಾ ಸಾಧಿಸಿದ್ದಾರೆ.

10 / 10
ಆದರೆ ಮತ್ತೊಂದೆಡೆ ರೋಹಿತ್ ಶರ್ಮಾ ತವರಿನಲ್ಲಿ 7 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 4 ಮ್ಯಾಚ್​ನಲ್ಲಿ ಗೆದ್ದರೆ, 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಇನ್ನು ಒಂದೇ ವರ್ಷದ ಅವಧಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ತವರಿನಲ್ಲಿ 2 ಪಂದ್ಯಗಳಲ್ಲಿ ಸೋಲನುಭವಿಸಿದೆ. ಹೀಗಾಗಿಯೇ ಇದೀಗ ವಿರಾಟ್ ಕೊಹ್ಲಿಯನ್ನು ಮತ್ತೆ ಟೆಸ್ಟ್ ತಂಡದ ನಾಯಕರನ್ನಾಗಿ ಮಾಡಬೇಕೆಂಬ ಅಭಿಪ್ರಾಯಗಳು ಕೇಳಿ ಬರಲಾರಂಭಿಸಿದೆ.