- Kannada News Photo gallery Cricket photos Rohit Sharma will become the first cricketer to play 150 T20I
Rohit Sharma: ಹೊಸ ಇತಿಹಾಸ ಬರೆಯಲಿರುವ ರೋಹಿತ್ ಶರ್ಮಾ
Rohit Sharma Records: ಟೀಮ್ ಇಂಡಿಯಾ ಪರ 149 ಟಿ20 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಇದುವರೆಗೆ 3853 ರನ್ಗಳನ್ನು ಬಾರಿಸಿದ್ದಾರೆ. ಹಾಗೆಯೇ 20 ವಿಕೆಟ್ಗಳನ್ನು ಕೂಡ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
Updated on: Jan 14, 2024 | 6:38 AM

ಇಂದೋರ್ನಲ್ಲಿ ನಡೆಯಲಿರುವ ಭಾರತ-ಅಫ್ಘಾನಿಸ್ತಾನ್ ನಡುವಣ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊಸ ಇತಿಹಾಸ ಬರೆಯಲಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರು ಕೂಡ ಮಾಡದ ಸಾಧನೆಯೊಂದಿಗೆ ವಿಶೇಷ.

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ಪ್ಲೇಯರ್ 150 ಪಂದ್ಯಗಳಲ್ಲಿ ಕಣಕ್ಕಿಳಿದಿಲ್ಲ. ಇದೀಗ 149 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ 150 ಮ್ಯಾಚ್ಗಳನ್ನಾಡಿದ ಸಾಧನೆ ಮಾಡಲಿದ್ದಾರೆ.

ಈ ಸಾಧನೆ ಮಾಡಿದ ವಿಶ್ವ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಲಿದೆ. ಹಾಗೆಯೇ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಐರ್ಲೆಂಡ್ ಆಟಗಾರ.

ಐರ್ಲೆಂಡ್ನ ಪೌಲ್ ಸ್ಟೀರ್ಲಿಂಗ್ ಒಟ್ಟು 134 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 3438 ರನ್ ಹಾಗೂ 20 ವಿಕೆಟ್ ಕಬಳಿಸುವಲ್ಲಿ ಸ್ಟೀರ್ಲಿಂಗ್ ಯಶಸ್ವಿಯಾಗಿದ್ದಾರೆ.

ಇದೀಗ 150ನೇ ಪಂದ್ಯದ ಹೊಸ್ತಿಲಲ್ಲಿರುವ ರೋಹಿತ್ ಶರ್ಮಾ ಇದುವರೆಗೆ 3853 ರನ್ಗಳನ್ನು ಬಾರಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್ನಲ್ಲಿ 20 ವಿಕೆಟ್ಗಳನ್ನು ಕೂಡ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಒಟ್ಟು 115 ಟಿ20 ಪಂದ್ಯಗಳನ್ನಾಡಿರುವ ಕಿಂಗ್ ಕೊಹ್ಲಿ 4008 ರನ್ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 4 ಸಾವಿರ ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.
