ICC ODI Rankings: ನಿವೃತ್ತಿ ಅಂಚಿನಲ್ಲಿ ಅಗ್ರಸ್ಥಾನ; ವಿಶ್ವ ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮಾ

Updated on: Oct 29, 2025 | 2:43 PM

Rohit Sharma ICC Ranking: ರೋಹಿತ್ ಶರ್ಮಾ ಐಸಿಸಿ ಏಕದಿನ ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಉತ್ತಮ ಪ್ರದರ್ಶನದ ನಂತರ ಶುಭ್​ಮನ್ ಗಿಲ್ ಅವರನ್ನು ಹಿಂದಿಕ್ಕಿ ನಂ.1 ಸ್ಥಾನ ಪಡೆದಿದ್ದಾರೆ. 38ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಅತ್ಯಂತ ಹಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ಹಾಗೆಯೇ ತಮ್ಮ 18 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.

1 / 6
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಒಂದು ಅರ್ಧಶತಕ ಹಾಗೂ ಅಜೇಯ ಶತಕದ ಇನ್ನಿಂಗ್ಸ್ ಆಡಿದ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ, ಐಸಿಸಿ ಇಂದು ಬಿಡುಗಡೆ ಮಾಡಿರುವ ಏಕದಿನ ಬ್ಯಾಟ್ಸ್‌ಮನ್​ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಪ್ರಸ್ತುತ 781 ರೇಟಿಂಗ್ ಪಾಯಿಂಟ್​ಗಳನ್ನು ಹೊಂದಿರುವ ರೋಹಿತ್, ಹಾಲಿ ಏಕದಿನ ನಾಯಕ ಶುಭ್​ಮನ್​ ಗಿಲ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಒಂದು ಅರ್ಧಶತಕ ಹಾಗೂ ಅಜೇಯ ಶತಕದ ಇನ್ನಿಂಗ್ಸ್ ಆಡಿದ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ, ಐಸಿಸಿ ಇಂದು ಬಿಡುಗಡೆ ಮಾಡಿರುವ ಏಕದಿನ ಬ್ಯಾಟ್ಸ್‌ಮನ್​ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಪ್ರಸ್ತುತ 781 ರೇಟಿಂಗ್ ಪಾಯಿಂಟ್​ಗಳನ್ನು ಹೊಂದಿರುವ ರೋಹಿತ್, ಹಾಲಿ ಏಕದಿನ ನಾಯಕ ಶುಭ್​ಮನ್​ ಗಿಲ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

2 / 6

ಈ ಮೂಲಕ 38ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನಕ್ಕೇರಿದ ಅತ್ಯಂತ ಹಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ಇತ್ತ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಏಕದಿನ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಿದ ಶುಭ್​ಮನ್ ಗಿಲ್ ಇಡೀ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಗಿಲ್ ನಂಬರ್ ಒನ್ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

3 / 6

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅಡಿದ ಮೂರು ಪಂದ್ಯಗಳಲ್ಲಿ ರೋಹಿತ್ ಶರ್ಮಾ 202 ರನ್ ಕಲೆಹಾಕಿದರು. ಈ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು. ಆದಾಗ್ಯೂ ರೋಹಿತ್​ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಮತ್ತು ಅಂತಿಮ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ತಮ್ಮ ತಂಡವನ್ನು ಗೆಲುವಿನತ್ತ ಕೊಂಡೊಯ್ದಿರು.

4 / 6

ಮೇಲೆ ಹೇಳಿದಂತೆ ರೋಹಿತ್, 38 ವರ್ಷ ಮತ್ತು 182 ದಿನಗಳಲ್ಲಿ ಏಕದಿನ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನವನ್ನು ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ರೋಹಿತ್, ತಮ್ಮ 18 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಏಕದಿನದಲ್ಲಿ ನಂ. 1 ಶ್ರೇಯಾಂಕ ಪಡೆದುಕೊಂಡಿದ್ದಾರೆ.

5 / 6

ಇದರ ಜೊತೆಗೆ ಏಕದಿನ ಕ್ರಿಕೆಟ್‌ನಲ್ಲಿ ನಂ. 1 ಸ್ಥಾನಕ್ಕೇರಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರೋಹಿತ್ ಪಾತ್ರರಾಗಿದ್ದಾರೆ. ರೋಹಿತ್​ಗೂ ಮೊದಲು ಸಚಿನ್ ತೆಂಡೂಲ್ಕರ್, ಎಂ ಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ದೀರ್ಘಕಾಲದವರೆಗೆ ಈ ಸ್ಥಾನವನ್ನು ಅಲಂಕರಿಸಿದ್ದರು. ಹಾಗೆಯೇ ಶುಭಮನ್ ಗಿಲ್ ಕೂಡ ಏಕದಿನ ಶ್ರೇಯಾಂಕದಲ್ಲಿ ನಂ. 1 ಸ್ಥಾನಕ್ಕೇರಿದ್ದರು. ಈಗ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ.

6 / 6

ರೋಹಿತ್ ಶರ್ಮಾ ಅವರ ಏಕದಿನ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಇಲ್ಲಿಯವರೆಗೆ 276 ಏಕದಿನ ಪಂದ್ಯಗಳನ್ನಾಡಿರುವ ಹಿಟ್​ಮ್ಯಾನ್, 49.22 ರ ಸರಾಸರಿಯಲ್ಲಿ 11,370 ರನ್ ಬಾರಿಸಿದ್ದಾರೆ. ಇದರಲ್ಲಿ 33 ಶತಕಗಳು ಮತ್ತು 59 ಅರ್ಧಶತಕಗಳು ಸೇರಿವೆ.

Published On - 2:35 pm, Wed, 29 October 25

Loading...
Unable to load recommendations.
Follow Us