AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: 5 ಭರ್ಜರಿ ರೆಕಾರ್ಡ್ಸ್​: ಹಿಟ್​ಮ್ಯಾನ್ ಅಬ್ಬರಕ್ಕೆ ಹಳೆಯ ದಾಖಲೆಗಳು ಧೂಳೀಪಟ

Rohit Sharma Records: ಅಫ್ಘಾನಿಸ್ತಾನ್ ವಿರುದ್ಧದ ಭರ್ಜರಿ ಶತಕದೊಂದಿಗೆ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ವಿವರ ಈ ಕೆಳಗೆ ನೀಡಲಾಗಿದೆ....

TV9 Web
| Edited By: |

Updated on: Jan 18, 2024 | 8:53 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಹಿಟ್​ಮ್ಯಾನ್ 69 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 121 ರನ್ ಬಾರಿಸಿದ್ದರು.

1 / 7
ಈ ಭರ್ಜರಿ ಶತಕದೊಂದಿಗೆ ರೋಹಿತ್ ಶರ್ಮಾ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ವಿವರ ಈ ಕೆಳಗೆ ನೀಡಲಾಗಿದೆ....

2 / 7
1- ಅಫ್ಘಾನಿಸ್ತಾನ್ ವಿರುದ್ಧ ಶತಕ ಪೂರೈಸುವುದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ರೋಹಿತ್ ಶರ್ಮಾ ಪಾಲಾಗಿದೆ. ಹಿಟ್​ಮ್ಯಾನ್ ಇದುವರೆಗೆ 5 ಟಿ20 ಶತಕಗಳನ್ನು ಸಿಡಿಸಿ ಈ ವಿಶ್ವ ದಾಖಲೆ ಬರೆದಿದ್ದಾರೆ.

3 / 7
2- ಈ ಪಂದ್ಯದಲ್ಲಿ 121 ರನ್​ಗಳನ್ನು ಬಾರಿಸಿ ಅಬ್ಬರಿಸಿದ್ದ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಾಜಿ ನಾಯಕ ವಿರಾಟ್ ಕೊಹ್ಲಿ (1570) ಹೆಸರಿನಲ್ಲಿತ್ತು. ಇದೀಗ 1647 ರನ್ ಬಾರಿಸಿ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ಹಿಟ್​ಮ್ಯಾನ್ ತಮ್ಮದಾಗಿಸಿಕೊಂಡಿದ್ದಾರೆ.

4 / 7
3- ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟ್​ನಿಂದ ಬರೋಬ್ಬರಿ 8 ಸಿಕ್ಸ್​ಗಳು ಮೂಡಿಬಂದಿತ್ತು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ನಾಯಕ ಎಂಬ ದಾಖಲೆ ಕೂಡ ಹಿಟ್​ಮ್ಯಾನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಮಾಜಿ ನಾಯಕ ಇಯಾನ್ ಮೋರ್ಗನ್ (86 ಸಿಕ್ಸ್​) ಹೆಸರಿನಲ್ಲಿತ್ತು. ಇದೀಗ 90 ಸಿಕ್ಸ್ ಸಿಡಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ಇತಿಹಾಸ ಬರೆದಿದ್ದಾರೆ.

5 / 7
4- ಈ ಭರ್ಜರಿ ಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಭಾರತ ತಂಡದ ನಾಯಕ ಎಂಬ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಿದೆ. ಈ ಪಂದ್ಯದಲ್ಲಿ ಅಜೇಯ 121 ರನ್ ಬಾರಿಸುವ ಮೂಲಕ ಹಿಟ್​ಮ್ಯಾನ್ ಈ ವಿಶೇಷ ಸಾಧನೆ ಮಾಡಿದ್ದಾರೆ.

6 / 7
5- ಈ ಸೆಂಚುರಿಯೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ನಾಯಕ ಎಂಬ ಹೆಗ್ಗಳಿಕೆಗೂ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಒಂದು ಭರ್ಜರಿ ಶತಕ ಸಿಡಿಸಿ ಹಿಟ್​ಮ್ಯಾನ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವುದು ವಿಶೇಷ.

7 / 7
TV9 Web
TV9 Web

TV9 Kannada

Read More
Follow Us
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?