- Kannada News Photo gallery Cricket photos Rohits Sharma's Record: Players with 200 T20 matches as captain
Rohits Sharma: RCB ವಿರುದ್ಧ ಕಣಕ್ಕಿಳಿಯುತ್ತಿದ್ದಂತೆ ದಾಖಲೆ ಬರೆದ ರೋಹಿತ್ ಶರ್ಮಾ
IPL 2023 Kannada: ವೆಸ್ಟ್ ಇಂಡೀಸ್ ಟಿ20 ತಂಡ, ಸಿಪಿಎಲ್ ಹಾಗೂ ಪಿಎಸ್ಎಲ್ ತಂಡಗಳನ್ನು ಒಳಗೊಂಂಡಂತೆ ಒಟ್ಟು 208 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.
Updated on: Apr 02, 2023 | 9:29 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 5ನೇ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಅಂತಿಂಥ ದಾಖಲೆಯಲ್ಲ ಎಂಬುದೇ ಮತ್ತೊಂದು ವಿಶೇಷ.

ಹೌದು, ಆರ್ಸಿಬಿ ವಿರುದ್ಧ ಟಾಸ್ಗೆ ಆಗಮಿಸುತ್ತಿದಂತೆ ರೋಹಿತ್ ಶರ್ಮಾ 200 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡ ವಿಶೇಷ ಸಾಧನೆ ಮಾಡಿದರು. ಅಂದರೆ ಟಿ20 ಕ್ರಿಕೆಟ್ನಲ್ಲಿ (ಐಪಿಎಲ್, ಟಿ20ಐ) ಈ ಸಾಧನೆ ಮಾಡಿರುವುದು ಕೇವಲ ಮೂವರು ಆಟಗಾರರು ಮಾತ್ರ.

ಈ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅಗ್ರಸ್ಥಾನದಲ್ಲಿದ್ದಾರೆ. ಧೋನಿ ಸಿಎಸ್ಕೆ, ರೈಸಿಂಗ್ ಪುಣೆ ಜೈಂಟ್ಸ್ ಹಾಗೂ ಟೀಮ್ ಇಂಡಿಯಾ ಟಿ20 ತಂಡವನ್ನು ಮುನ್ನಡೆಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಅಂದರೆ ಟಿ20 ಕ್ರಿಕೆಟ್ನಲ್ಲಿ ಬರೋಬ್ಬರಿ 307 ಪಂದ್ಯಗಳಲ್ಲಿ ಧೋನಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಹಾಗೆಯೇ ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಡಾರೆನ್ ಸಮಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಸಮಿ ವೆಸ್ಟ್ ಇಂಡೀಸ್ ಟಿ20 ತಂಡ, ಸಿಪಿಎಲ್ ಹಾಗೂ ಪಿಎಸ್ಎಲ್ ತಂಡಗಳನ್ನು ಒಳಗೊಂಂಡಂತೆ ಒಟ್ಟು 208 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಇದೀಗ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಒಟ್ಟು 200 ಟಿ20 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡ ಹಿರಿಮೆ ಪಾತ್ರರಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.
