AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Mandhana: ಸ್ಮೃತಿ ಮಂಧಾನ ಮನಮೋಹಕ ಆಟಕ್ಕೆ ಆರ್​ಸಿಬಿ ಫಿದಾ: ಮಾಡಿದ ಟ್ವೀಟ್ ಏನು ಗೊತ್ತೇ?

INDW vs IREW, WT20 WC: ಐಸಿಸಿ ಮಹಿಳಾ ಟಿ20 ವಿಶ್ವಕಪ್​ನ ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಸ್ಮೃತಿ ಮಂಧಾನ ಅವರ ಮನಮೋಹಕ ಆಟಕ್ಕೆ ಫಿದಾ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಶೇಷವಾಗಿ ಬರೆದುಕೊಂಡಿದೆ.

Vinay Bhat
|

Updated on:Feb 21, 2023 | 8:37 AM

Share
ದಕ್ಷಿಣ ಆಫ್ರಿಕಾದಲ್ಲಿ ಸಾಗುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ವನಿತೆಯರು ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಜಯ ಹಾಗೂ ಒಂದು ಪಂದ್ಯದಲ್ಲಿ ಸೋಲು ಕಂಡಿರುವ ಹರ್ಮನ್ ಪಡೆ ಸೆಮಿ ಫೈನಲ್​ಗೂ ಪ್ರವೇಶ ಪಡೆದಿದೆ. ಸೋಮವಾರ ಐರ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 5 ರನ್​ಗಳ ರೋಚಕ ಜಯ ಸಾಧಿಸಿತು.

1 / 8
ಭಾರತ ಗೆಲುವಿನಲ್ಲಿ ಸ್ಟಾರ್​ ಬ್ಯಾಟರ್ ಸ್ಮೃತಿ ಮಂಧಾನ ಕೊಡುಗೆ ಅಪಾರವಾಗಿತ್ತು. ಈ ಪಂದ್ಯದ ಮೊದಲ ಓವರ್​ನಿಂದ 19ನೇ ಓವರ್ ವರೆಗೆ ಕ್ರೀಸ್​​ನಲ್ಲಿದ್ದ ಮಂಧಾನ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 56 ಎಸೆತಗಳಲ್ಲಿ 87 ರನ್​ಗಳನ್ನು ಚಚ್ಚಿದರು. ಇದು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇವರ ಗರಿಷ್ಠ ಸ್ಕೋರ್ ಆಗಿದೆ.

2 / 8
ಮಂಧಾನ ಅವರ ಈ ಮನಮೋಹಕ ಆಟಕ್ಕೆ ಫಿದಾ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಶೇಷವಾಗಿ ಬರೆದುಕೊಂಡಿದೆ. ''ನಮ್ಮ ನಂಂಬರ್ 18 ನಿಂದ ಮತ್ತೊಂದು ದಿನ, ಮತ್ತೊಂದು ಅರ್ಧಶತಕ, ಇದೇ ಲಯದಲ್ಲಿ ಮುಂದುವರೆಯಿರಿ ಸ್ಮೃತಿ,'' ಎಂದು ಬರೆದು ಫೊಟೋ ಹಂಚಿಕೊಂಡಿದೆ.

3 / 8
ಐರ್ಲೆಂಡ್​ ವಿರುದ್ಧದ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಸ್ಮೃತಿ 41 ಎಸೆತಗಳಲ್ಲಿ 52 ರನ್ ಗಳಿಸಿ ತಂಡಕ್ಕೆ ಕೊಡುಗೆ ನೀಡಿದ್ದರು. ಇದನ್ನು ನೆನಪಿಸಿಕೊಂಡು ಆರ್​ಸಿಬಿ ಟ್ವೀಟ್ ಮಾಡಿದೆ. ಇಲ್ಲಿ ನಂಬರ್ 18 ಎಂಬುದು ಸ್ಮೃತಿ ಅವರ ಜೆರ್ಸಿ ಸಂಖ್ಯೆ ಆಗಿದೆ.

4 / 8
ಇತ್ತೀಚೆಗಷ್ಟೆ ಮಂಧಾನ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮಹಿಳಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಬರೋಬ್ಬರಿ 3.4 ಕೋಟಿ ಕೊಟ್ಟು ಖರೀದಿ ಮಾಡಿತ್ತು. ಈ ಮೂಲಕ ಡಬ್ಲ್ಯೂಪಿಎಲ್​ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆದ ಆಟಗಾರ್ತಿ ಆದರು. ಅಲ್ಲದೆ ಆರ್​ಸಿಬಿ ಮಂಧಾನ ಅವರಿಗೆ ಕ್ಯಾಪ್ಟನ್ ಪಟ್ಟ ಕೂಡ ನೀಡಿದೆ. (ಫೋಟೋ ಕೃಪೆ: ಆರ್​ಸಿಬಿ ಟ್ವಿಟ್ಟರ್ ಖಾತೆ)

5 / 8
ಸದ್ಯ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಸೆಮೀಸ್​ಗೆ ತಲುಪಿರುವ ಭಾರತ ತಂಡ ಫೆಬ್ರವರಿ 23 ಗುರುವಾರದಂದು ಕೇಪ್​ಟೌನ್​ನ ನ್ಯೂಲೆಂಡ್ಸ್​ನಲ್ಲಿ ಆಸ್ಟ್ರೇಲಿಯಾ ವಿರುದ್ದ ಸೆಣೆಸಾಟ ನಡೆಸಲಿದೆ. ಆಸೀಸ್ ವಿರುದ್ಧ ಕೆಟ್ಟ ದಾಖಲೆ ಹೊಂದಿರುವ ಹರ್ಮನ್ ಪಡೆ ಯಾವರೀತಿ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ.

6 / 8
ಭಾರತದ ಬ್ಯಾಟಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿರುವ ಸ್ಮೃತಿ ಮಂಧಾನ ಭರ್ಜರಿ ಫಾರ್ಮ್​ನಲ್ಲಿರುವುದು ತಂಡದ ಪ್ಲಸ್ ಪಾಯಿಂಟ್. ಆದರೆ, ಟೂರ್ನಿಯಲ್ಲಿ ಇವರಿಗೆ ಬೇರೆ ಬ್ಯಾಟರ್​ಗಳು ಸರಿಯಾದ ಸಾಥ್ ನೀಡುತ್ತಿಲ್ಲ. ಸೆಮೀಸ್​ನಲ್ಲಾದರು ಮ್ಯಾಚ್ ವಿನ್ನಿಂಗ್ ಪ್ರದರ್ಶನ ಬರುವ ನಿರೀಕ್ಷಿಯಿದೆ.

7 / 8
ಭಾರತ- ಆಸ್ಟ್ರೇಲಿಯಾ ಸೆಮಿ ಫೈನಲ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 6:30ಕ್ಕೆ ಶುರುವಾಗಲಿದೆ. 6 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.

8 / 8

Published On - 8:36 am, Tue, 21 February 23

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ