AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs RR: W,W,W, W.. ಸಿಎಸ್​ಕೆ ಪೆವಿಲಿಯನ್ ಪರೇಡ್ ಶುರು

IPL 2026, CSK Powerplay Collapse vs RR: ಐಪಿಎಲ್ 2026ರ ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದಲ್ಲಿ CSK ಬ್ಯಾಟಿಂಗ್ ಕುಸಿತ ಕಂಡಿದೆ. ಪವರ್‌ಪ್ಲೇನಲ್ಲಿಯೇ ರುತುರಾಜ್ ಗಾಯಕ್ವಾಡ್ ಮತ್ತು ಸಂಜು ಸ್ಯಾಮ್ಸನ್ ಸೇರಿದಂತೆ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಗಳಿಸಿದೆ. ಈ ಅನಿರೀಕ್ಷಿತ ಆರಂಭ ತಂಡವನ್ನು ತೀವ್ರ ಒತ್ತಡಕ್ಕೆ ಸಿಲುಕಿಸಿದೆ, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಪೃಥ್ವಿಶಂಕರ
|

Updated on: Mar 30, 2026 | 8:31 PM

Share
ಐಪಿಎಲ್ 2026 ರ ಮೂರನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡಗಳು ಪವರ್‌ಪ್ಲೇನಲ್ಲಿ ರನ್​ ಮಳೆಯನ್ನೇ ಹರಿಸಿದ್ದವು. ಹೀಗಾಗಿ ಈ ಪಂದ್ಯದಲ್ಲೂ ಅದೇ ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿದೆ.

1 / 6
ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಕಲೆಹಾಕಿದೆ. ಇದು ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸಿದೆ.

2 / 6
ಇಂದಿನ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕರಾಗಿ ಬಂದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಸಂಜು ಸ್ಯಾಮ್ಸನ್ ಅವರಿಂದ ಉತ್ತಮ ಆರಂಭದ ನಿರೀಕ್ಷೆ ಇಡಲಾಗಿತ್ತು. ಇಬ್ಬರು ಅಪಾರ ಅನುಭವ ಹೊಂದಿದ್ದರಿಂದ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಾರೆ ಎಂದ ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಇವರಿಬ್ಬರು 10 ರನ್​ಗಳ ಗಡಿ ದಾಟಲಾಗದೆ ಒಂದಂಕಿಗೆ ಸುಸ್ತಾದರು.

3 / 6
ಮೊದಲ ವಿಕೆಟ್ ರೂಪದಲ್ಲಿ ಸಂಜು ಸ್ಯಾಮ್ಸನ್ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು. ನಾಂದ್ರೆ ಬರ್ಗರ್ ಬೌಲ್ ಮಾಡಿದ ಇನ್ನಿಂಗ್ಸ್​ನ 2ನೇ ಓವರ್​ನ ಕೊನೆಯ ಎಸೆತದಲ್ಲಿ ಸಂಜು ಕ್ಲೀನ್ ಬೌಲ್ಡ್ ಆದರು. ಸಂಜು ತಮ್ಮ ಇನ್ನಿಂಗ್ಸ್​ನಲ್ಲಿ 7 ಎಸೆತಗಳನ್ನು ಎದುರಿಸಿ 6 ರನ್​ಗಳಿಗೆ ಔಟಾದರು. ಸಂಜು ಅವರ ಈ ಇನ್ನಿಂಗ್ಸ್​ನಲ್ಲಿ ಕೇವಲ ಒಂದು ಬೌಂಡರಿ ಸೇರಿತ್ತು.

4 / 6
ಇನ್ನು ಎಂದಿನಂತೆ ನಿಧಾನಗತಿಯ ಆರಂಭ ಮಾಡಿದ ರುತುರಾಜ್ ಗಾಯಕ್ವಾಡ್, ಸಂಜು ವಿಕೆಟ್ ಪತನದ ನಂತರ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊಂದಿದ್ದರು. ಆದರೆ ರುತುರಾಜ್ ಕೂಡ ಸಂಜು ಔಟಾದ ಮುಂದಿನ ಓವರ್​ನಲ್ಲೇ ಅಂದರೆ ಮೂರನೇ ಓವರ್​ನ ಕೊನೆಯ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ರುತುರಾಜ್ ತಮ್ಮ ಇನ್ನಿಂಗ್ಸ್​ನಲ್ಲಿ 11 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 6 ರನ್ ಬಾರಿಸಿ ಔಟಾದರು.

5 / 6
ರುತುರಾಜ್ ವಿಕೆಟ್ ಪತನದ ಬಳಿಕ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ವಿಕೆಟ್ ಕೂ ಪತನವಾಯಿತು. ಆರಂಭಿಕರಿಬ್ಬರು ಖಾತೆ ತೆರೆಯುವಲ್ಲಿ ಯಶಸ್ವಿಯಾದರೆ, ಆಯುಷ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅವರು ಮೊದಲ ಎಸೆತದಲ್ಲೇ ಕೀಪರ್​ ಕೈಗೆ ಕ್ಯಾಚಿತ್ತು ಔಟಾದರು. ಮತ್ತೊಬ್ಬ ಬ್ಯಾಟ್ಸ್‌ಮನ್ ಮ್ಯಾಟ್ ಶಾರ್ಟ್ ಕೂಡ 2 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

6 / 6
Follow Us
ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ?

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಾಗಮನ!

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು

ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು