- Kannada News Photo gallery Cricket photos RR vs RCB Match Today Start at 3 30PM in Sawai Mansingh Stadium This Pitch favours bowlers Kannada Sports News
RR vs RCB Pitch Report: ಆರ್ಸಿಬಿ ಸೋತರೆ ಪ್ಲೇ ಆಫ್ ಕನಸು ಭಗ್ನ: ಸವಾಯಿ ಮಾನ್ಸಿಂಗ್ ಪಿಚ್ ಯಾರಿಗೆ ಹೆಚ್ಚು ಸಹಕಾರಿ?
Sawai Mansingh Stadium Pitch Report: ಎಲ್ಲರ ಚಿತ್ತ ನೆಟ್ಟಿರುವ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್ಸಿಬಿ ನಡುವಣ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ.
Updated on: May 14, 2023 | 8:29 AM

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲೊಡ್ಡುತ್ತಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದ್ದು, ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಪಾಯಿಂಟ್ ಟೇಬಲ್ನಲ್ಲಿ ಆರ್ಸಿಬಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್ರೇಟ್ ಹೊಂದಿದೆ. ಇತ್ತ ರಾಜಸ್ಥಾನ್ ಐದನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್ರೇಟ್ನೊಂದಿಗೆ 12 ಅಂಕ ಸಂಪಾದಿಸಿದೆ.

ಪ್ಲೇ ಆಫ್ಗೇರುವ ದೃಷ್ಟಿಯಿಂದ ರಾಜಸ್ಥಾನ್-ಆರ್ಸಿಬಿ ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಆರ್ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಆರ್ಆರ್ ಸೋತರೆ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಇನ್ನು ಆರ್ಸಿಬಿ ಸೋತರೂ ಟೂರ್ನಿಯಿಂದ ಹೊರಬಿದ್ದಂತೆ.

ಎಲ್ಲರ ಚಿತ್ತ ನೆಟ್ಟಿರುವ ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಪಂದ್ಯ ಆರಂಭವಾದ ಕೆಲವು ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರೆ ನಂತರ ಸ್ಪಿನ್ನರ್ಗಳ ಆಟ ನಡೆಯಲಿದೆ.

ಈ ಮೈದಾನದಲ್ಲಿ ಅತಿ ದೊಡ್ಡ ಬೌಂಡರಿ ಇರುವುದರಿಂದ ದೊಡ್ಡ ಮೊತ್ತ ಕಲೆಹಾಕುವುದು ಕಷ್ಟ. ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುವುದು ಖಚತ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ಇದುವರೆಗೂ 50 ಐಪಿಎಲ್ ಪಂದ್ಯಗಳು ನಡೆದಿದ್ದು 17 ಬಾರಿ ಮೊದಲು ಬ್ಯಾಟ್ ಮಾಡಿದ್ದ ತಂಡಗಳು ಜಯ ಗಳಿಸಿದ್ದರೆ, 33 ಬಾರಿ ಟಾರ್ಗೆಟ್ ಬೆನ್ನಟ್ಟಿದ ತಂಡಗಳು ಗೆಲುವು ಪಡೆದುಕೊಂಡಿದೆ.

ಉಭಯ ತಂಡಗಳ ಮುಖಾಮುಖಿ ನೋಡುವುದಾದರೆ ಒಟ್ಟು 29 ಪಂದ್ಯಗಳು ನಡೆದಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು 12 ಪಂದ್ಯ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಮ್ಯಾಚ್ನಲ್ಲಿ ಗೆಲುವು ಸಾಧಿಸಿ ಪಾರುಪತ್ಯ ಮೆರೆದಿದೆ.



















