16 ಬೌಂಡರಿ, 11 ಸಿಕ್ಸರ್; 74 ಎಸೆತಗಳಲ್ಲಿ ಅಜೇಯ 148 ರನ್ ಚಚ್ಚಿದ ರುತುರಾಜ್ ಗಾಯಕ್ವಾಡ್
Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ರುತುರಾಜ್ ಗಾಯಕ್ವಾಡ್ ಸ್ಫೋಟಕ ಶತಕ ಬಾರಿಸಿದ್ದಾರೆ. ಮಹಾರಾಷ್ಟ್ರ ತಂಡದ ನಾಯಕರಾಗಿರುವ ರುತುರಾಜ್ ಕೇವಲ 74 ಎಸೆತಗಳಲ್ಲಿ ಅಜೇಯ 148 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು 11 ಸಿಕ್ಸರ್‌ಗಳು ಸೇರಿದ್ದವು.
1 / 6
ಅಗಾದ ಪ್ರತಿಭೆ ಇದ್ದರೂ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆಯುವಲ್ಲಿ ಎಡವುತ್ತಿರುವ ಟೀಂ ಇಂಡಿಯಾದ ಯುವ ಕ್ರಿಕೆಟಿಗ ರುತುರಾಜ್ ಗಾಯಕ್ವಾಡ್ ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಮತ್ತೊಮ್ಮೆ ಟೀಂ ಇಂಡಿಯಾದ ಕದ ತಟ್ಟಿದ್ದಾರೆ.
2 / 6
ವಿಜಯ್ ಹಜಾರೆ ಟ್ರೋಫಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಮಹಾರಾಷ್ಟ್ರ ಮತ್ತು ಸರ್ವಿಸಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕನಾಗಿರುವ ರುತುರಾಜ್ ಗಾಯಕ್ವಾಡ್ ಬೌಂಡರಿ ಹಾಗೂ ಸಿಕ್ಸರ್ಗಳ ಮಳೆಗರೆದು ತಂಡವನ್ನು ಏಕಪಕ್ಷೀಯವಾಗಿ ಗೆಲುವಿನತ್ತ ಮುನ್ನಡೆಸಿದರು.
3 / 6
ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಸರ್ವಿಸಸ್ ತಂಡ ಕೇವಲ 48 ಓವರ್‌ಗಳ 204 ರನ್ ಗಳಿಸಿ ಆಲೌಟ್ ಆಯಿತು.
4 / 6
ಸರ್ವಿಸಸ್ ತಂಡದ ನಾಯಕ ಮೋಹಿತ್ ಅಹ್ಲಾವತ್ ಗರಿಷ್ಠ 61 ರನ್ ಗಳಿಸಿದರು. ಇವರನ್ನು ಬಿಟ್ಟರೆ ಬೇರಾವ ಬ್ಯಾಟ್ಸ್‌ಮನ್‌ಗೂ 30 ರನ್‌ಗಳ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ, ಮಹಾರಾಷ್ಟ್ರ ತಂಡದ ಪರ ಪ್ರದೀಪ್ ದಾಧೆ ಮತ್ತು ಸತ್ಯಜಿತ್ ಬಚಾವ್ ತಲಾ 3 ವಿಕೆಟ್ ಪಡೆದರು.
5 / 6
ಗೆಲ್ಲಲು 205 ರನ್‌ಗಳ ಗುರಿ ಪಡೆದಿದ್ದ ಮಹಾರಾಷ್ಟ್ರ ತಂಡಕ್ಕೆ ರುತುರಾಜ್ ಗಾಯಕ್ವಾಡ್ ಅತ್ಯಂತ ವೇಗವಾಗಿ ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಈ ಇನ್ನಿಂಗ್ಸ್‌ನಲ್ಲಿ ಅವರು 74 ಎಸೆತಗಳಲ್ಲಿ ಅಜೇಯ 148 ರನ್ ಗಳಿಸಿದರು. ಗಾಯಕ್ವಾಡ್ ಅವರ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು 11 ಸಿಕ್ಸರ್‌ಗಳು ಸೇರಿದ್ದವು. ರುತುರಾಜ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್ನಿಂದಾಗಿ ಮಹಾರಾಷ್ಟ್ರ ತಂಡ ಕೇವಲ 20.2 ಓವರ್‌ಗಳಲ್ಲಿಯೇ ಜಯದ ನಗೆಬೀರಿತು.
6 / 6
ಮಹಾರಾಷ್ಟ್ರ ತಂಡ ಈ ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ. ತನ್ನ ಆರಂಭಿಕ ಎರಡೂ ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸರ್ವಿಸಸ್ಗೂ ಮೊದಲು, ಮಹಾರಾಷ್ಟ್ರವು ರಾಜಸ್ಥಾನವನ್ನು ಎದುರಿಸಿತು. ಆ ಪಂದ್ಯದಲ್ಲೂ ಮಹಾರಾಷ್ಟ್ರ ತಂಡ 3 ವಿಕೆಟ್‌ಗಳ ಜಯ ಸಾಧಿಸಿತ್ತು. ಆದರೆ, ರಾಜಸ್ಥಾನ ವಿರುದ್ಧ ರನ್ ಗಳಿಸುವಲ್ಲಿ ಎಡವಿದ್ದ ರುತುರಾಜ್ ಗಾಯಕ್ವಾಡ್ 5 ಎಸೆತಗಳಲ್ಲಿ 1 ರನ್ ಗಳಿಸಿ ಔಟಾಗಿದ್ದರು. ಆದರೆ ಈ ಬಾರಿ ಏಕಾಂಗಿಯಾಗಿ ನಿಂತು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.