Team India: ಟೀಮ್ ಇಂಡಿಯಾ ಪರ ಇಬ್ಬರು ಯುವ ದಾಂಡಿಗರು ಕಣಕ್ಕಿಳಿಯುವುದು ಬಹುತೇಕ ಖಚಿತ..!

| Updated By: ಝಾಹಿರ್ ಯೂಸುಫ್

Updated on: Jun 20, 2023 | 10:30 PM

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದೆ. ಹಾಗೆಯೇ ಜುಲೈ 20 ರಿಂದ 24 ರವರೆಗೆ ಎರಡನೇ ಟೆಸ್ಟ್ ಪಂದ್ಯ ಜರುಗಲಿದೆ.

1 / 7
West Indies vs India: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ (Team India) 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ ಇಂಡಿಯಾ ಕೆಲ ಪ್ರಯೋಗ ನಡೆಸಲಿದೆ ಎಂದು ವರದಿಯಾಗಿದೆ.

2 / 7
ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಸೋಲಿನಿಂದ ಮುಖಭಂಗಕ್ಕೆ ಒಳಗಾಗಿರುವ ಬಿಸಿಸಿಐ ಇದೀಗ ತಂಡದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕೆಲ ಯುವ ಆಟಗಾರರಿಗೆ ಅವಕಾಶ ನೀಡಲು ಬಯಸಿದೆ.

3 / 7
ಅದರಲ್ಲೂ ಟೆಸ್ಟ್ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಿ ಪ್ರಯೋಗ ಮಾಡಲು ನಿರ್ಧರಿಸಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಬಲಗೈ ದಾಂಡಿಗ ರುತುರಾಜ್ ಗಾಯಕ್ವಾಡ್ ರನ್ನು ಕಣಕ್ಕಿಳಿಸಲಿದೆ ಎಂದು ವರದಿಯಾಗಿದೆ.

4 / 7
ದೇಶೀಯ ಅಂಗಳದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ 26 ಇನಿಂಗ್ಸ್​ಗಳಿಂದ ಒಟ್ಟು 1845 ಪೇರಿಸಿದ್ದಾರೆ. ಹೀಗಾಗಿಯೇ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್​ ಫೈನಲ್ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

5 / 7
ಮತ್ತೊಂದೆಡೆ ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇವರ ಸ್ಥಾನದಲ್ಲಿ ರುತುರಾಜ್ ಗಾಯಕ್ವಾಡ್​ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

6 / 7
ರುತುರಾಜ್ ಗಾಯಕ್ವಾಡ್ ಕೂಡ ರಣಜಿ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, 47 ಇನಿಂಗ್ಸ್​ಗಳಲ್ಲಿ 1941 ರನ್ ಪೇರಿಸಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ ಆಡಿದ 71 ಇನಿಂಗ್ಸ್​ಗಳಿಂದ 4034 ರನ್ ಕಲೆಹಾಕಿದ್ದಾರೆ.

7 / 7
ಹೀಗಾಗಿ ಡೊಮಿನಿಕಾದಲ್ಲಿ ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್ ಹಾಗೂ ಜುಲೈ 20 ರಿಂದ 24 ರವರೆಗೆ ಜರುಗಲಿರುವ ಎರಡನೇ ಟೆಸ್ಟ್ ಪಂದ್ಯಗಳಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.