
ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸವನ್ನು ನಿರ್ಮಿಸಿರುವುದು ಭಾರತೀಯ ಬ್ಯಾಟರ್ ರುತುರಾಜ್ ಗಾಯಕ್ವಾಡ್ (Ruturaj gaikwad). ಅದು ಕೂಡ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: BCCI)

ಜೂನ್ 9, 2026 ರಂದು ಶ್ರೀಲಂಕಾ ಎ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ 101 ರನ್ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಈ ಶತಕದೊಂದಿಗೆ ರುತುರಾಜ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತ್ಯಧಿಕ ಸರಾಸರಿ ಹೊಂದಿರುವ ಬ್ಯಾಟರ್ ಎನಿಸಿಕೊಂಡಿದ್ಸಾರೆ. (PC: BCCI)

ಅಂದರೆ ಲಿಸ್ಟ್ ಎ (ಏಕದಿನ) ಕ್ರಿಕೆಟ್‌ನಲ್ಲಿ ಕನಿಷ್ಠ 100 ಪಂದ್ಯಗಳನ್ನಾಡಿ ಅತ್ಯಧಿಕ ಸರಾಸರಿ ಹೊಂದಿರುವ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ರುತುರಾಜ್ ಗಾಯಕ್ವಾಡ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ ಈ ವಿಶ್ವ ದಾಖಲೆ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರು. (PC: BCCI)

ಲಿಸ್ಟ್ ಎ (ಏಕದಿನ) ಕ್ರಿಕೆಟ್‌ನಲ್ಲಿ 347 ಪಂದ್ಯಗಳಲ್ಲಿ 334 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 57.91 ಸರಾಸರಿಯಲ್ಲಿ 16447 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ 100 ಇನಿಂಗ್ಸ್ ಆಡಿ ಅತ್ಯಧಿಕ ಸರಾಸರಿಯಲ್ಲಿ (57.91) ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು. (PC: BCCI)

ಇದೀಗ 100 ಪಂದ್ಯಗಳನ್ನಾಡಿ ರುತುರಾಜ್ ಗಾಯಕ್ವಾಡ್ ಈ ದಾಖಲೆ ಮುರಿದಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇವರೆಗೆ 96 ಇನಿಂಗ್ಸ್ ಆಡಿರುವ ರುತುರಾಜ್ 59.32 ಸರಾಸರಿಯಲ್ಲಿ 5161 ರನ್ ಪೇರಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ (57.91) ಹೆಸರಿನಲ್ಲಿದ್ದ ಲಿಸ್ಟ್ ಎ ಬೆಸ್ಟ್ ಅವರೇಜ್ ವಿಶ್ವ ದಾಖಲೆಯನ್ನು ರುತುರಾಜ್ ಗಾಯಕ್ವಾಡ್ (59.32) ತಮ್ಮದಾಗಿಸಿಕೊಂಡಿದ್ದಾರೆ. (PC: BCCI)