
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುವ ಸ್ಟಾರ್ ಆರಂಭಿಕ ರುತುರಾಜ್ ಗಾಯಕ್ವಾಡ್ ಅವರು ಮಹಾರಾಷ್ಟ್ರ ಮಹಿಳಾ ಕ್ರಿಕೆಟ್ ತಂಡದ ಆಲ್ರೌಂಡರ್ ಉತ್ಕರ್ಷ ಪವಾರ್ ಅವರೊಂದುಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ರುತುರಾಜ್ ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ.

ರುತುರಾಜ್ ಈ ಖುಷಿಯ ಕ್ಷಣವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

“From the pitch to the altar, our journey begins!” ಎಂದು ಬರೆದು ರುತುರಾಜ್ ಫೋಟೋ ಶೇರ್ ಮಾಡಿದ್ದಾರೆ.

ರುತುರಾಜ್ ಗಾಯಕ್ವಾಡ್-ಉತ್ಕರ್ಷ ಪವಾರ್ ವಿವಾಹಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್, ಉಮ್ರಾನ್ ಮಲಿಕ್ ಸೇರಿದಂತೆ ಅನೇಕ ಆಟಗಾರರು ಶುಭ ಕೋರಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

ಮದುವೆಯ ಸಂಭ್ರಮದಲ್ಲಿ ರುತುರಾಜ್ ಗಾಯಕ್ವಾಡ್.

ಎಂಎಸ್ ಧೋನಿ ಜೊತೆ ರುತುರಾಜ್ ಗಾಯಕ್ವಾಡ್ ಹಾಗೂ ಉತ್ಕರ್ಷ ಪವಾರ್