IPL 2022: ತಂಡದಿಂದ ಇಬ್ಬರು ಸ್ಟಾರ್ ಆಟಗಾರರು ಔಟ್: CSK ಗೆ ಹೊಸ ಚಿಂತೆ ಶುರು

| Updated By: ಝಾಹಿರ್ ಯೂಸುಫ್

Updated on: Feb 26, 2022 | 3:59 PM

Ruturaj Gaikwad: ಈ ಇಬ್ಬರು ಆಟಗಾರರು ಐಪಿಎಲ್​ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಗಾಯಗೊಂಡಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

1 / 5
ಐಪಿಎಲ್ ಸೀಸನ್ 15 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಸ್ಟಾರ್ ಆಟಗಾರರು ಗಾಯಗೊಂಡಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ.

2 / 5
ಹೌದು, ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಹೀಗಾಗಿ  ಶ್ರೀಲಂಕಾ ವಿರುದ್ದದ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಶ್ರೀಲಂಕಾ ಸರಣಿ ವೇಳೆ ಮತ್ತೋರ್ವ ಸಿಎಸ್​ಕೆ ಆಟಗಾರ ಗಾಯಗೊಂಡಿದ್ದಾರೆ.

3 / 5
ಶ್ರೀಲಂಕಾ ವಿರುದ್ದ ಮೊದಲ ಟಿ20 ಪಂದ್ಯಕ್ಕೂ ಮುನ್ನ ಅಭ್ಯಾಸದ ವೇಳೆ ರುತುರಾಜ್ ಗಾಯಕ್ವಾಡ್ ಗಾಯಗೊಂಡಿದ್ದಾರೆ. ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ವೇಳೆ ಮಣಿಕಟ್ಟಿಗೆ ಗಾಯವಾಗಿದ್ದು, ಹೀಗಾಗಿ ಲಂಕಾ ವಿರುದ್ದದ ಸರಣಿಯಿಂದ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ ಅವರ ಬದಲಿ ಆಟಗಾರನಾಗಿ ಮಯಾಂಕ್ ಅಗರ್ವಾಲ್ ಟೀಮ್ ಇಂಡಿಯಾಗೆ ಸೇರ್ಪಡೆಯಾಗಿದ್ದಾರೆ.

4 / 5
ಇದೀಗ ಗಾಯಗೊಂಡಿರುವ ರುತುರಾಜ್ ಗಾಯಕ್ವಾಡ್ ತಜ್ಞರ ಸಮಾಲೋಚನೆಯ ನಂತರ MRI ಸ್ಕ್ಯಾನ್ ನಡೆಸಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಗಾಯದ ಹೆಚ್ಚಿನ ನಿರ್ವಹಣೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಿದ್ದಾರೆ. ಇನ್ನು ದೀಪಕ್ ಚಹರ್ ಕೂಡ ಗಾಯದಿಂದ ಚೇತರಿಸಿಕೊಳ್ಳಲು ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆಯಿದೆ.

5 / 5
ಈ ಇಬ್ಬರು ಆಟಗಾರರು ಐಪಿಎಲ್​ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಗಾಯಗೊಂಡಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ರುತುರಾಜ್ ಗಾಯಕ್ವಾಡ್ ಹಾಗೂ ದೀಪಕ್ ಚಹರ್ ತಂಡದ ಪ್ಲೇಯಿಂಗ್​ ಇಲೆವೆನ್​​ನ ಖಾಯಂ ಸದಸ್ಯರು. ಈ ಇಬ್ಬರು ಆಟಗಾರರು ಐಪಿಎಲ್​ನಿಂದ ಹೊರಬಿದ್ದರೆ ಸಿಎಸ್​ಕೆ ತಂಡದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಸಿಎಸ್​ಕೆ ಫ್ರಾಂಚೈಸಿ ಕೂಡ ಈ ಇಬ್ಬರು ಆಟಗಾರರು ಗಾಯದ ಕುರಿತಾದ ಅಪ್​ಡೇಟ್​ಗಳನ್ನು ಪಡೆದುಕೊಳ್ಳುತ್ತಿದ್ದಾರೆ.