AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಯಾನ್ ರಿಕೆಲ್ಟನ್ ಅಬ್ಬರಕ್ಕೆ ಎಬಿಡಿ ದಾಖಲೆ ಉಡೀಸ್

Afghanistan vs South Africa: ಚಾಂಪಿಯನ್ಸ್ ಟ್ರೋಫಿಯ ಮೂರನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 315 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ್ ತಂಡ 43.2 ಓವರ್​ಗಳಲ್ಲಿ 208 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸೌತ್ ಆಫ್ರಿಕಾ 107 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on:Feb 22, 2025 | 12:54 PM

Share
ಚಾಂಪಿಯನ್ಸ್ ಟ್ರೋಫಿಯ ಮೂರನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಯಾನ್ ರಿಕೆಲ್ಟನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ರಯಾನ್ ರಿಕೆಲ್ಟನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಟೋನಿ ಡಿ ಝೋರ್ಝಿ ಕೇವಲ 11 ರನ್​ಗಳಿಸಿ ಔಟಾದರು. ಈ ಹಂತದಲ್ಲಿ ಜೊತೆಗೂಡಿದ ರಯಾನ್ ಹಾಗೂ ಬವುಮಾ ಉತ್ತಮ ಜೊತೆಯಾಟ ಪ್ರದರ್ಶಿಸಿದರು.

2 / 5
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ರಯಾನ್ ರಿಕೆಲ್ಟನ್ ಕೇವಲ 40 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದರೆ ಆ ಬಳಿಕ ಎಚ್ಚರಿಕೆ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟಿದ ಅವರು 101 ಎಸೆತಗಳಲ್ಲಿ ಶತಕ ಸಿಡಿಸಿದರು. ಈ ಶತಕದೊಂದಿಗೆ ಸೌತ್ ಆಫ್ರಿಕಾ ಪರ ವಿಶೇಷ ದಾಖಲೆಯೊಂದನ್ನು ಬರೆದರು.

3 / 5
ಅಂದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಸೌತ್ ಆಫ್ರಿಕಾ ಪರ ಯಾವುದೇ ವಿಕೆಟ್ ಕೀಪರ್ ಬ್ಯಾಟರ್ ಶತಕ ಸಿಡಿಸಿರಲಿಲ್ಲ. 2013 ರ ಆವೃತ್ತಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಎಬಿ ಡಿವಿಲಿಯರ್ಸ್ 70 ರನ್ ಬಾರಿಸಿದ್ದೇ ಸೌತ್ ಆಫ್ರಿಕಾ ವಿಕೆಟ್ ಕೀಪರ್​ನ ಗರಿಷ್ಠ ಸ್ಕೋರ್​. ಇದೀಗ ಎಬಿಡಿಯ ದಾಖಲೆ ಮುರಿಯುವಲ್ಲಿ ರಯಾನ್ ರಿಕೆಲ್ಟನ್ ಯಶಸ್ವಿಯಾಗಿದ್ದಾರೆ.

4 / 5
ಅಫ್ಘಾನಿಸ್ತಾನ್ ವಿರುದ್ಧ 106 ಎಸೆತಗಳನ್ನು ಎದುರಿಸಿದ ರಯಾನ್ ರಿಕೆಲ್ಟನ್ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 103 ರನ್ ಬಾರಿಸಿದ್ದಾರೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಸೌತ್ ಆಫ್ರಿಕಾ ಪರ ಶತಕ ಸಿಡಿಸಿದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ರಯಾನ್ ರಿಕೆಲ್ಟನ್ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 12:54 pm, Sat, 22 February 25

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 